ಅಂತರಾಷ್ಟ್ರೀಯ
ಸೌದಿ ಅರೇಬಿಯಾ ವಿಮಾನ ನಿಲ್ದಾಣದ ಮೇಲೆ ಹೌತಿ ಬಂಡುಕೋರರ ಭೀಕರ ಕ್ಷಿಪಣಿ ದಾಳಿ: ಹೈದರಾಬಾದ್ ಮೂಲದ ವ್ಯಕ್ತಿ ಸಾವು, ಹಲವರಿಗೆ ಗಾಯ!
ರಿಯಾದ್: ಸೌದಿ ಅರೇಬಿಯಾದ (Saudi Arabia) ರಾಜಧಾನಿ ರಿಯಾದ್ನಲ್ಲಿರುವ ಪ್ರಮುಖ ಕಿಂಗ್ ಖಾಲಿದ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಮೇಲೆ ಯೆಮೆನ್ನ ಹೌತಿ ಬಂಡುಕೋರರು ನಡೆಸಿದ ಭೀಕರ ಕ್ಷಿಪಣಿ ದಾಳಿಯಲ್ಲಿ (Missile Attack) ಹೈದರಾಬಾದ್ ಮೂಲದ ಭಾರತೀಯರೊಬ್ಬರು ದಾರುಣವಾಗಿ ಮೃತಪಟ್ಟಿದ್ದಾರೆ. ಹೈದರಾಬಾದ್ನ ಮೆಹದಿಪಟ್ನಂ ನಿವಾಸಿಯಾದ ಮೊಹಮ್ಮದ್ ಯೂಸುಫ್ ಅಲಿ (Mohammed Yusuf Ali) ಎಂಬುವವರೇ ಮೃತ ದುರ್ದೈವಿ. ಶನಿವಾರ (ಅಕ್ಟೋಬರ್ 10) ನಡೆದ ಮೊದಲ ಹಂತದ ದಾಳಿಯಲ್ಲಿ ಅವರು ಪ್ರಾಣ ಕಳೆದುಕೊಂಡಿದ್ದಾರೆ.


