ನಾಟಕ
‘ಗಾಂಧಿ ಹತ್ಯೆಯ ಸತ್ಯ’ ಕ್ಕೆ ಹೈಕೋರ್ಟ್ ಗ್ರೀನ್ ಸಿಗ್ನಲ್: ಪ್ರದರ್ಶನಕ್ಕೆ ಭದ್ರತೆ ನೀಡಲು ಗೃಹ ಇಲಾಖೆಗೆ ನಿರ್ದೇಶನ!
ಉದಯಕಾಲ ನ್ಯೂಸ್, ಬೆಂಗಳೂರು: ತೀವ್ರ ವಿವಾದ ಹಾಗೂ ಪ್ರತಿಭಟನೆಗಳಿಗೆ ಕಾರಣವಾಗಿದ್ದ ‘ಗಾಂಧಿ ಹತ್ಯೆಯ ಸತ್ಯ’ ನಾಟಕದ ಪ್ರದರ್ಶನಕ್ಕೆ ಕರ್ನಾಟಕ ಹೈಕೋರ್ಟ್ ಮಹತ್ವದ ರಕ್ಷಣೆ ಒದಗಿಸಿದೆ. ಕೊಡಗಿನ ರಂಗಭೂಮಿ ಟ್ರಸ್ಟ್ ಅಧ್ಯಕ್ಷ ಅಡ್ಡಂಡ ಕಾರ್ಯಪ್ಪ ಅವರು ರಚಿಸಿ, ವಿನ್ಯಾಸಗೊಳಿಸಿ ನಿರ್ದೇಶಿಸಿರುವ ‘ಗಾಂಧಿ ಹತ್ಯೆಯ ಸತ್ಯ’ ಹೆಸರಿನ ನಾಟಕವನ್ನು ಪ್ರದರ್ಶಿಸಲು ಮತ್ತು ಆಯೋಜಿಸಲು ಉದ್ದೇಶಿಸಿರುವ ಸ್ಥಳಗಳಲ್ಲಿ ಸೂಕ್ತ ಪೊಲೀಸ್ ರಕ್ಷಣೆ ಒದಗಿಸಬೇಕು ಎಂದು ರಾಜ್ಯ ಗೃಹ ಇಲಾಖೆಗೆ ಹೈಕೋರ್ಟ್ ನಿರ್ದೇಶನ ನೀಡಿದೆ. ಏಕಸದಸ್ಯ

