ʻಆಪರೇಷನ್ ಸಿಂಧೂರ್ʼ ದಾಳಿಯ ನಂತರ ಕಾಶ್ಮೀರದ ಗಡಿ ನಿಯಂತ್ರಣ ರೇಖೆಯುದ್ದ ಉದ್ವಿಗ್ನತೆ ತೀವ್ರಗೊಂಡಿದ್ದು, ಭಾರತೀಯ ವಾಯುಪಡೆಯು ಶ್ರೀನಗರ ವಿಮಾನ ನಿಲ್ದಾಣವನ್ನು ನಿಯಂತ್ರಣಕ್ಕೆ ಪಡೆದುಕೊಂಡಿದೆ.
ನಾಗರಿಕ ವಿಮಾನಗಳ ಕಾರ್ಯಾಚರಣೆಯನ್ನು ಅನಿರ್ದಿಷ್ಟಾವಧಿವರೆಗೆ ತಡೆ ಹಿಡಿಯಲಾಗಿದೆ. ಜಮ್ಮು ಮತ್ತು ಕಾಶ್ಮೀರ, ಅಮೃತಸರ, ಚಂಡೀಗಢ, ಧರ್ಮಶಾಲಾ, ಲೇಹ್‌ನ ವಿಮಾನ ನಿಲ್ದಾಣದಲ್ಲಿ ಕಾರ್ಯಾಚರಣೆ ಸ್ಥಗಿತಗೊಂಡಿದೆ. ಶ್ರೀನಗರ ವಿಮಾನ ನಿಲ್ದಾಣವು ಭಾರತೀಯ ವಾಯುಪಡೆಯ ನಿಯಂತ್ರಣದಲ್ಲಿದ್ದು, ವಿಮಾನ ಗಳ ಸಂಚಾರ, ಲ್ಯಾಂಡಿಂಗ್ ಅನ್ನು ನಿಯಂತ್ರಿಸುತ್ತದೆ. ವಾಯುಪ್ರದೇಶವನ್ನು ಹೊರತುಪಡಿಸಿ ಅಗ್ನಿಶಾಮಕ, ಎಲ್ಲಾ ವಾಯು ಸುರಕ್ಷತಾ ಕಾರ್ಯವಿಧಾನ ಅನುಸರಿಸಲಾಗುತ್ತಿದೆ.
ಪಹಲ್ಗಾಂ ದಾಳಿಗೆ ಪ್ರತೀಕಾರವಾಗಿ ಭಾರತ ಉಗ್ರರ ನೆಲೆಗಳ ಮೇಲೆ ವೈಮಾನಿಕ ದಾಳಿ ನಡೆಸಿದ ಬೆನ್ನಲ್ಲೇ ಜಮ್ಮು ಮತ್ತು ಕಾಶ್ಮೀರ ವ್ಯಾಪ್ತಿಯಲ್ಲಿನ ಜಮ್ಮು, ಸಾಂಬಾ, ಕಥುವಾ, ರಜೌರಿ ಮತ್ತು ಪೂಂಚ್ ಜಿಲ್ಲೆಗಳಲ್ಲಿ ಶಾಲಾ, ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.