Wednesday, September 24, 2025
Menu

ಅಧ್ಯಯನ ನೆಪದಲ್ಲಿ ಸರ್ಕಾರಿ ಅಧಿಕಾರಿಗಳ ವಿದೇಶ ಪ್ರವಾಸಕ್ಕೆ ರಾಜ್ಯ ಸರ್ಕಾರ ಬ್ರೇಕ್

ಅಧ್ಯಯನದ ಹೆಸರಿನಲ್ಲಿ ಪ್ರತಿ ಬಾರಿಯೂ ಸರ್ಕಾರಿ ಅಧಿಕಾರಿಗಳು ಕೈಗೊಳ್ಳುತ್ತಿದ್ದ ವಿದೇಶ ಪ್ರವಾಸವನ್ನು ಈ ಕೂಡಲೇ ಜಾರಿಗೆ ಬರುವಂತೆ ನಿರ್ಬಂಧಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

2024ನೇ ಸಾಲಿನ ಆಗಸ್ಟ್ ತಿಂಗಳಿನಿಂದ 2025ರ ಜುಲೈ ತಿಂಗಳವರೆಗೆ ರಾಜ್ಯ ಸರ್ಕಾರದಲ್ಲಿ ಕಾರ್ಯನಿರ್ವಹಿಸುತ್ತಿರುವ ಅಧಿಕಾರಿಗಳು ಅಧಿಕೃತ ವಿದೇಶ ಪ್ರವಾಸ ಕೈಗೊಂಡು ಅಧ್ಯಯನ ನಡೆಸಿ, ಕಲಿಕೆ ಹಾಗು ಶಿಫಾರಸ್ಸುಗಳೊಂದಿಗೆ ಸರ್ಕಾರಕ್ಕೆ ಅಧ್ಯಯನ ವರದಿಯನ್ನು ಒಂದು ವಾರದೊಳಗಾಗಿ ಸಲ್ಲಿಸುವಂತೆ ಮಾನ್ಯ ಮುಖ್ಯಮಂತ್ರಿಗಳಿಂದ ಸೂಚಿತವಾಗಿರುತ್ತದೆ ಎಂದು ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಸುತ್ತೋಲೆ ಹೊರಡಿಸಿದೆ.

ಆದರೆ, ಹಲವು ಅಧಿಕಾರಿಗಳು ಕೈಗೊಂಡಿರುವ ಅಧಿಕೃತ ವಿದೇಶ ಪ್ರವಾಸದ ವರದಿಗಳನ್ನು ಸಲ್ಲಿಸದಿರುವುದು ಸರ್ಕಾರದ ಗಮನಕ್ಕೆ ಬಂದಿದ್ದು, ಮುಂಬರುವ ದಿನಗಳಲ್ಲಿ ಅಧಿಕೃತ ವಿದೇಶ ಪ್ರವಾಸಕ್ಕೆ ಅನುಮತಿ ಕೋರಿ ಪ್ರಸ್ತಾವನೆಯನ್ನು ಸಲ್ಲಿಸುವ ಮುನ್ನ ಕಡ್ಡಾಯವಾಗಿ ಈ ಹಿಂದೆ ಕೈಗೊಂಡಿರುವ ಪ್ರವಾಸಗಳ ಕಲಿಕೆ ಹಾಗೂ ಅನುಷ್ಠಾನ ವರದಿ ನೀಡಿದ್ದಲ್ಲಿ ಮಾತ್ರ ಹಾಲಿ ಪ್ರವಾಸದ ಪ್ರಸ್ತಾವನೆಗೆ ಅನುಮತಿ ನೀಡುವ ಕುರಿತು ಪರಿಶೀಲಿಸಲಾಗುವುದೆಂದು ಈ ಮೂಲಕ ಸೂಚಿಸಲಾಗಿದೆ ಎಂದು ಹೇಳಿದ್ದಾರೆ. ಮುಂದುವರೆದು, ಈ ವರ್ಷ 2025ನೇ ಸಾಲಿನ ಅಂತ್ಯದವರೆಗೂ ತಕ್ಷಣದಿಂದ ಜಾರಿಗೆ ಬರುವಂತೆ ಹಾಗೂ ಮುಂದಿನ ಆದೇಶದವರೆಗೆ ಅಧಿಕೃತ ವಿದೇಶ ಪ್ರವಾಸಗಳನ್ನು ನಿರ್ಭಂಧಿಸಿ ಆದೇಶಿಸಿದ್ದಾರೆ.

 

Related Posts

Leave a Reply

Your email address will not be published. Required fields are marked *