ಅನ್ನಭಾಗ್ಯ ಯೋಜನೆಯಡಿ ರಾಜ್ಯ ಸರ್ಕಾರ ಹಣದ ಬದಲು ಪೂರ್ಣ 10 ಕೆಜಿ ಅಕ್ಕಿಯನ್ನು ನೀಡುವುದಾಗಿ ಆಹಾರ ಸಚಿವ ಕೆಎಚ್ ಮುನಿಯಪ್ಪ ಘೋಷಿಸಿದ್ದಾರೆ.
ಬೆಂಗಳೂರಿನಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಈ ವಿಷಯ ಪ್ರಕಟಿಸಲಿ ಅವರು, ಚುನಾವಣಾ ಪೂರ್ವದಲ್ಲಿ ಘೋಷಣೆ ಮಾಡಿದಂತೆ ಫೆಬ್ರವರಿ ತಿಂಗಳಿನಿಂದಲೇ 5 ಕೆಜಿ ಅಕ್ಕಿ ಬದಲು ಪೂರ್ಣ 10 ಕೆಜಿ ಅಕ್ಕಿ ಪಡಿತರದಲ್ಲಿ ನೀಡಲಾಗುವುದು. ಜನವರಿ ತಿಂಗಳವರೆಗೆ ೧೭೦ ಬಿಪಿಎಲ್ ಕಾರ್ಡ್ ಫಲಾನುಭವಿಗಳಿಗೆ ನೀಡಲಾಗುವುದು ಎಂದರು.
ಕೇಂದ್ರ ಸರ್ಕಾರ ಅಕ್ಕಿ ಕೊಡಲು ಒಪ್ಪಿಗೆ ಸೂಚಿಸಿದೆ. ಈ ಹಿನ್ನೆಲೆಯಲ್ಲಿ ಫೆಬ್ರವರಿ ತಿಂಗಳಿನಿಂದಲೇ ಪ್ರತಿ ತಿಂಗಳು ಬಿಪಿಎಲ್ ಕಾರ್ಡ್ ಹೊಂದಿದವರಿಗೆ ಚುನಾವಣಾ ಪ್ರಣಾಳಿಕೆಯಲ್ಲಿ ಘೋಷಣೆ ಮಾಡಿದಂತೆ ಪೂರ್ಣ 10 ಕೆಜಿ ಅಕ್ಕಿ ನೀಡಲು ನಿರ್ಧರಿಸಲಾಗಿದೆ ಎಂದು ಅವರು ಹೇಳಿದರು.
ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ರಾಜ್ಯದಲ್ಲಿ ಅಧಿಕಾರಕ್ಕೆ ಬಂದಾಗಿನಿಂದ ಕೇಂದ್ರ ಸರ್ಕಾರ ಹೆಚ್ಚುವರಿ ಅಕ್ಕಿ ನೀಡಲು ನಿರಾಕರಿಸಿದ್ದರಿಂದ ಅನ್ನಭಾಗ್ಯ ಯೋಜನೆಯಡಿ 10 ಕೆಜಿ ಅಕ್ಕಿ ಬದಲು 5 ಕೆಜಿ ಅಕ್ಕಿ ಹಾಗೂ ಕೆಜಿಗೆ 34 ರೂ.ನಂತೆ 5 ಕೆಜಿಗೆ 170 ರೂ. ನೀಡಲಾಗುತ್ತಿತ್ತು ಎಂದು ಅವರು ವಿವರಿಸಿದರು.
ಇದೀಗ ಕೇಂದ್ರ ಸರ್ಕಾರ ಅಕ್ಕಿ ಕೊಡಲು ನಿರ್ಧರಿಸಿದ್ದರು. ಕೆಜಿಗೆ 22 ರೂ.ನಂತೆ ರಾಜ್ಯಕ್ಕೆ ಅಕ್ಕಿ ದೊರೆಯಲಿದೆ. ಸಾಗಾಟ ವೆಚ್ಚ ಸೇರಿ ರಾಜ್ಯಕ್ಕೆ ಕೆಜಿಗೆ 25 ರೂ. ವೆಚ್ಚವಾಗಲಿದೆ. ಇದರಿಂದ ಸುಮಾರು ೯ ರೂ. ಉಳಿತಾಯವಾಗಲಿದೆ ಎಂದು ಇಲಾಖೆಯ ಮೂಲಗಳು ತಿಳಿಸಿವೆ.