Menu

ಆರ್‌ಸಿಬಿ ವಿಜಯೋತ್ಸವದಲ್ಲಿ ಉಸಿರುಗಟ್ಟಿ 11 ಸಾವು: ಮರಣೋತ್ತರ ಪರೀಕ್ಷೆ ವರದಿ

ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಆರ್‌ಸಿಬಿ ವಿಜಯೋತ್ಸವ ವೇಳೆ ಕಾಲ್ತುಳಿತ ಸಂಭವಿಸಿ 11 ಮಂದಿ ಮೃತಪಟ್ಟಿರುವವರ ಮರಣೋತ್ತರ ಪರೀಕ್ಷೆ ನಡೆಸಿ ಕುಟುಂಬಸ್ಥರಿಗೆ ಮೃತದೇಹಗಳನ್ನು ಕುಟುಂಬಸ್ಥರಿಗೆ ಹಸ್ತಾಂತರಿಸಲಾಗಿದೆ. ಈ ಸಾವುಗಳಿಗೆ ಸ್ಥಳದಲ್ಲಿ ಉಸಿರಾಟಕ್ಕೆ ಸಮಸ್ಯೆಯಾಗಿರುವುದೇ ಕಾರಣ ಎಂದು ಮರಣೋತ್ತರ ವರದಿ ತಿಳಿಸಿದೆ.

ಬೌರಿಂಗ್‌ನಲ್ಲಿ 6 ಹಾಗೂ ವಿಕ್ಟೋರಿಯಾದಲ್ಲಿ 5 ಮೃತದೇಹಗಳ ಮರಣೋತ್ತರ ಪರೀಕ್ಷೆ ನಡೆಸಿ ಸಂಬಂಧಿಕರಿಗೆ ಹಸ್ತಾಂತರಿಸಲಾಗಿದೆ. ಎಲ್ಲರೂ ಉಸಿರಾಟ ಸಮಸ್ಯೆಯಿಂದ ಮೃತಪಟ್ಟಿರುವುದು ವರದಿಯಲ್ಲಿ ದೃಢಪಟ್ಟಿದೆ.

ಕೆಲವರು ಉಸಿರುಗಟ್ಟುವಿಕೆಯಿಂದ ತಕ್ಷಣ ಅಸು ನೀಗಿದ್ದರೆ, ಕೆಲವರ ಎದೆಯ ಭಾಗದಲ್ಲಿ ಹೆಚ್ಚು ಒತ್ತಡ ಬಿದ್ದು ಮೃತಪಟ್ಟಿದ್ದಾರೆ. ಸಾವಿಗೆ ಉಸಿರುಗಟ್ಟುವಿಕೆ ಬಿಟ್ಟರೆ ಬೇರೆ ಯಾವುದೇ ಕಾರಣದ ಅಂಶ ಪತ್ತೆಯಾಗಿಲ್ಲ. ಇಬ್ಬರಿಗೆ ಉಸಿರುಗಟ್ಟಿ ಹೃದಯ ಸ್ತಂಭನವಾಗಿದೆ.

ಬೌರಿಂಗ್ ಆಸ್ಪತ್ರೆಯಲ್ಲಿ 9 ಜನರಿಗೆ ಚಿಕಿತ್ಸೆ ಮುಂದುವರಿದಿದೆ. ಇವರಲ್ಲಿ ಇಬ್ಬರಿಗೆ ಕಾಲು ಮೂಳೆ ಮುರಿದಿದೆ. ಒಬ್ಬರಿಗೆ ತಲೆಗೆ ಗಾಯ ಆಗಿದೆ. ಉಳಿದವರಿಗೆ ಸಣ್ಣಪುಟ್ಟ ಸಮಸ್ಯೆಗಳಾಗಿದೆ.

Related Posts

Leave a Reply

Your email address will not be published. Required fields are marked *