ಬೆಂಗಳೂರು: ಆಟವಾಡುತ್ತಿದ್ದ 11 ವರ್ಷದ ಬಾಲಕಿ ವಿದ್ಯುತ್ ಶಾಕ್ ನಿಂದ ಮೃತಪಟ್ಟ ಘಟನೆ ಬೆಂಗಳೂರು ಹೊರವಲಯದ ಆನೇಕಲ್ ತಾಲೂಕಿನ ನಾರಾಯಣಘಟ್ಟದಲ್ಲಿ ನಡೆದಿದೆ.
ಸೂರ್ಯನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮಂಗಳವಾರ ಈ ಘಟನೆ ನಡೆದಿದ್ದು, ನಾರಾಯಣಘಟ್ಟ ಗ್ರಾಮದ ತನಿಷ್ಕಾ (11) ಮೃತ ಬಾಲಕಿ.
ಶಾಲೆಗೆ ರಜೆ ಇದ್ದ ಕಾರಣ ತನಿಷ್ಕಾ ಮನೆ ಬಳಿಯೇ ಆಟವಾಡುತ್ತಿದ್ದಳು. ವಿದ್ಯುತ್ ಕಂಬದ ಬಳಿ ಆಟವಾಡುತ್ತಿದ್ದಾಗ ಕರೆಂಟ್ ಶಾಕ್ ತಗುಲಿದೆ.
ವಿದ್ಯುತ್ ಶಾಕ್ನಿಂದ ಗಾಯಗೊಂಡಿದ್ದ ತನಿಷ್ಕಾಳನ್ನ ಕೂಡಲೇ ಆಸ್ಪತ್ರೆಗೆ ದಾಖಲಿಸಲಾಗಿತ್ತಾದ್ರೂ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾಳೆ.
ಬೆಸ್ಕಾಂ ಅಧಿಕಾರಿಗಳ ಪೋಷಕರು ಆಕ್ರೋಶ ಹೊರಹಾಕಿದ್ದಾರೆ. ಆಸ್ಪತ್ರೆ ಮುಂಭಾಗ ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ.