Menu

ರಾಸಾಯನಿಕ ಕಾರ್ಖಾನೆ ಸ್ಫೋಟ: 12 ಮಂದಿ ಸಾವು

hydrabad blast

ಹೈದರಾಬಾದ್: ರಾಸಾಯನಿಕ ಕಾರ್ಖಾನೆಯಲ್ಲಿ ರಿಯಾಕ್ಟರ್​ ಸ್ಫೋಟದಿಂದ 12 ಮಂದಿ ಮೃತಪಟ್ಟ ದಾರುಣ ಘಟನೆ ತೆಲಂಗಾಣದಲ್ಲಿ ಸೋಮವಾರ ಸಂಭವಿಸಿದೆ.

ಹೈದರಾಬಾದ್​ನ ಪತಂಚೇರುವಿನ ಪಾಶಮೈಲಾರಂನಲ್ಲಿರುವ ರಾಸಾಯನಿಕ ಕಾರ್ಖಾನೆಯಲ್ಲಿ ರಿಯಾಕ್ಟರ್​ ಸ್ಫೋಟ ಸಂಭವಿಸಿದ್ದು, 20ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ. ಪರಿಸ್ಥಿತಿಯನ್ನು ನಿಯಂತ್ರಿಸಲು ಅಗ್ನಿಶಾಮಕ ದಳ ಮತ್ತು ರಕ್ಷಣಾ ತಂಡಗಳು ಸ್ಥಳಕ್ಕೆ ಧಾವಿಸಿವೆ.

ಗಾಯಗೊಂಡ ಹಲವಾರು ಕಾರ್ಮಿಕರ ಸ್ಥಿತಿ ಗಂಭೀರವಾಗಿದೆ. ಅಧಿಕಾರಿಗಳು ರಕ್ಷಣಾ ಮತ್ತು ಪರಿಹಾರ ಕಾರ್ಯಾಚರಣೆಗಳನ್ನು ಮುಂದುವರೆಸಿದ್ದಾರೆ. ಸ್ಫೋಟಗೊಂಡ ಬಳಿಕ ಕಾರ್ಮಿಕರು ಸುಮಾರು 100 ಮೀಟರ್ ದೂರಕ್ಕೆ ಎಸೆಯಲ್ಪಟ್ಟಿದ್ದಾರೆ.

Related Posts

Leave a Reply

Your email address will not be published. Required fields are marked *