ಪಂಜಾಬ್‌ನ ಅಮೃತಸರ ಜಿಲ್ಲೆಯ ಗ್ರಾಮಗಳಲ್ಲಿ ಇಟ್ಟಿಗೆ ಗೂಡುಗಳಲ್ಲಿ ಕಾರ್ಮಿಕರಾಗಿ ಕೆಲಸ ಮಾಡುತ್ತಿದ್ದವರು ನಕಲಿ ಮದ್ಯ ಸೇವಿಸಿದ ಪರಿಣಾಮವಾಗಿ 14 ಮಂದಿ ಮೃತಪಟ್ಟಿದ್ದಾರೆ. ಭಂಗಲಿ, ಪಾತಾಳಪುರಿ, ಮರಾರಿ ಕಲಾನ್, ಥೆರೆವಾಲ್ ಮತ್ತು ತಲ್ಯಾಂಡಿ ಘುಮಾನ್ ಗ್ರಾಮಗಳಲ್ಲಿ ಈ ಸಾವು ಸಂಭವಿಸಿವೆ.
ಅಗ್ಗದ ದರದಲ್ಲಿ ಲಭ್ಯವಾದ ನಕಲಿ ಮದ್ಯವನ್ನು ಸೇವಿಸಿದ್ದರಿಂದ ಈ ದುರಂತ ನಡೆದಿದೆ. ಹಲವರು ಗಂಭೀರ ಸ್ಥಿತಿಯಲ್ಲಿದ್ದು, ಸಾವಿನ ಸಂಖ್ಯೆ ಮತ್ತಷ್ಟು ಹೆಚ್ಚಾಗುವ ಆತಂಕವಿದೆ. ಸೋಮವಾರ ರಾತ್ರಿ ನಕಲಿ ಮದ್ಯ ಸೇವಿಸಿದವರು ತೀವ್ರ ಅಸ್ವಸ್ಥರಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. 15 ಜನರು ಚಿಕಿತ್ಸೆಗೆ ಸ್ಪಂದಿಸದೆ ಅಸು ನೀಗಿದ್ದಾರೆ. ಈ ಮದ್ಯವು ವಿಷಕಾರಕ ರಾಸಾಯನಿಕಗಳಿಂದ ಕೂಡಿತ್ತು ಎಂದು ತನಿಖಾಧಿಕಾರಿಗಳು ಶಂಕಿಸಿದ್ದಾರೆ. ಗಂಭೀರ ಸ್ಥಿತಿಯಲ್ಲಿರುವ ರೋಗಿಗಳಿಗೆ ಸ್ಥಳೀಯ ಆಸ್ಪತ್ರೆಗಳಲ್ಲಿ ತುರ್ತು ಚಿಕಿತ್ಸೆ ನೀಡಲಾಗುತ್ತಿದೆ.
ಅಮೃತಸರ ಉಪ ಆಯುಕ್ತ ಸಾಕ್ಷಿ ಸಾಹ್ನಿ, ಎಸ್‌ಎಸ್‌ಪಿ ಮಣೀಂದರ್ ಸಿಂಗ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿ, ನಕಲಿ ಮದ್ಯದಿಂದ ಸಾವುಗಳು ಸಂಭವಿಸಿವೆ ಎಂಬ ಮಾಹಿತಿ ಸಿಕ್ಕ ತಕ್ಷಣ ಕ್ರಮ ಕೈಗೊಂಡಿದ್ದೇವೆ. ನಾಲ್ವರು ಆರೋಪಿಗಳನ್ನು ಬಂಧಿಸಲಾಗಿದೆ ಎಂದು ತಿಳಿಸಿದ್ದಾರೆ.