Menu

ಉಧಂಪುರದಲ್ಲಿ ಬಸ್‌ ಉರುಳಿ 15 ಮಂದಿ ಸಾವು

ಚಾಲಕನ ನಿಯಂತ್ರಣ ತಪ್ಪಿದ ಬಸ್ ಕಂದಕಕ್ಕೆ ಉರುಳಿಬಿದ್ದು, 15 ಮಂದಿ ಪ್ರಾಣ ಕಳೆದುಕೊಂಡಿರುವ ಘಟನೆ ಜಮ್ಮು ಮತ್ತು ಕಾಶ್ಮೀರದ ಉಧಂಪುರ ಜಿಲ್ಲೆಯಲ್ಲಿ ನಡೆದಿದೆ.

ಘಟನೆಯಲ್ಲಿ ಹಲವರು ಗಾಯಗೊಂಡಿದ್ದು, ಕೆಲವರ ಸ್ಥಿತಿ ಗಂಭೀರವಾಗಿದೆ, ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿದ್ದು, ಚಿಕಿತ್ಸೆ ಮುಂದುವರಿದಿದೆ. ರಾಮನಗರದಿಂದ ಉಧಂಪುರಕ್ಕೆ ಹೋಗುತ್ತಿದ್ದ ಬಸ್ ತಿರುವಿನಲ್ಲಿ ನಿಯಂತ್ರಣ ಕಳೆದುಕೊಂಡಿದ್ದೇ ಈ ದುರಂತಕ್ಕೆ ಕಾರಣ. ಸೇನೆ, ಪೊಲೀಸರು ಹಾಗೂ ಸ್ಥಳೀಯರು ರಕ್ಷಣಾ ಕಾರ್ಯಾಚರಣೆ ಕೈಗೊಂಡಿದ್ದಾರೆ.

ಘಟನೆ ಕುರಿತು ಕೇಂದ್ರ ಸಚಿವ ಜಿತೇಂದ್ರ ಸಿಂಗ್ ಜಿಲ್ಲಾಧಿಕಾರಿಗಳೊಂದಿಗೆ ಮಾತನಾಡಿ ಗಂಭೀರವಾಗಿ ಗಾಯಗೊಂಡವರನ್ನು ವಿಮಾನದಲ್ಲಿ ಸಾಗಿಸುವ ವ್ಯವಸ್ಥೆ ಸೇರಿದಂತೆ ಎಲ್ಲಾ ರೀತಿಯ ಸಹಾಯವನ್ನು ಒದಗಿಸುವ ಭರವಸೆ ನೀಡಿದ್ದಾರೆ.

ಬಸ್‌ ನಿಯಂತ್ರಣ ತಪ್ಪಿ ಆಡೊಗೆ ಡಿಕ್ಕಿ ಹೊಡೆದು ಬಳಿಕ ಉರುಳಿದೆ.  ಆಟೊದಲ್ಲಿದ್ದ ಪ್ರಯಾಣಿಕರು ಅದೃಷ್ಟವಶಾತ್‌ ಪ್ರಾಣಾಪಾಯದಿಂದ ಪಾರಾಗಿದ್ದಾರೆ.  ಬಸ್‌ನಲ್ಲಿ ವಿದ್ಯಾರ್ಥಿಗಳು, ಉದ್ಯೋಗಿಗಳು ಸೇರಿದಂತೆ ಪ್ರಯಾಣಿಕರಿದ್ದು,  ಗಾಯಗೊಂಡ ಹಲವರ ಸ್ಥಿತಿ ಚಿಂತಾಜನಕವಾಗಿದೆ.

 

Related Posts

Leave a Reply

Your email address will not be published. Required fields are marked *