ಬೆಂಗಳೂರು: ಸಾಮಾಜಿಕ ಜಾಲತಾಣಗಳ ಮೂಲಕ ಸಮಾಜದ ಸಾಮರಸ್ಯ ಹಾಳು ಮಾಡುವವರ ವಿರುದ್ದ ಭದ್ರತಾ ಕಾಯ್ದೆಯಡಿ ಪ್ರಕರಣ ದಾಖಲಿಸಲಿಸುವ ಜೊತೆಗೆ ಸುಳ್ಳು ಸುದ್ದಿಗಳ ಮೇಲೆ ನಿಗಾ ವಹಿಸಿ ಈ ವರ್ಷ ರಾಜ್ಯದಲ್ಲಿ 85 ಪ್ರಕರಣಗಳನ್ನು ಹಾಗೂ 65 ಸ್ವಯಂ ಪ್ರೇರಿತ ಪ್ರಕರಣಗಳನ್ನು ದಾಖಲಿಸಲಾಗಿದೆ ಎಂದು ವಿಧಾನಪರಿಷತ್ ಗೆ ಗೃಹ ಸಚಿವ ಡಾ.ಪರಮೇಶ್ವರ ಹೇಳಿದರು.
ಗುರುವಾರ ಪ್ರಶ್ನೋತ್ತರ ವೇಳೆಯಲ್ಲಿ ಬಿಜೆಪಿಯ ಕೆ.ಎಸ್. ನವೀನ್ ಅವರ ಪ್ರಶ್ನೆೆಗೆ ಉತ್ತರಿಸಿ ಸಚಿವರು ಜಾಲತಾಣಗಳ ಮೂಲಕ ಸಮಾಜದ ಸಾಮರಸ್ಯ ಹಾಳು ಮಾಡುವವರ ವಿರುದ್ಧ ಪೊಲೀಸ್ ಠಾಣೆಗಳಲ್ಲಿ ಪ್ರಕರಣ ದಾಖಲಿಸಲಾಗುತ್ತಿಿದ್ದು ಜಾಲತಾಣಗಳ ಬಳಕೆ ಬಗ್ಗೆೆ ಅರಿವು ಮೂಡಿಸಲಾಗುತ್ತಿದೆ. ಸುಳ್ಳು ಸುದ್ದಿಗಳ ಬಗ್ಗೆೆ ಕೆಎಸ್‌ಪಿ ಆ್ಯಪ್ ಮೂಲಕ ಫ್ಯಾಾಕ್‌ಟ್ ಚೆಕ್ ಮಾಡಿಸಿ ನೈಜ ಮಾಹಿತಿ ಕಲೆಹಾಕಲಾಗುತ್ತಿದೆ ಎಂದರು.
ಜಾಲತಾಣಗಳ ಮೇಲೆ ಹೆಚ್ಚಿನ ನಿಗಾಯಿರಿಸಲಾಗಿದೆ. ಪ್ರತಿ ಪೋಲಿಸ್ ಠಾಣೆಯಲ್ಲಿ ಡೆಸ್ಕ್ ಸ್ಥಾಪಿಸಲಾಗಿದೆ. ಕಾನೂನು ಸುವ್ಯವಸ್ಥೆೆಗೆ ಒಂದು ಡೆಸ್ಕ್, ಸಂಘನೆಗಳ ಮೇಲೆ ನಿಗಾವಹಿಸಲು ಒಂದು ಡೆಸ್‌ಕ್, ವಯಕ್ತಿಕ ವಿಚಾರಗಳ ಮೇಲೆ ನಿಗಾಯಿಡಲು ಒಂದು ಡೆಸ್ಕ್ ಸ್ಥಾಾಪಿಸಲಾಗಿದೆ.
ಈ ಡೆಸ್ಕ್ ಗಳು ತಮ್ಮ ವ್ಯಾಾಪ್ತಿಿಯ ಜಾಲತಾಣಗಳ ಸಂದೇಶಗಳ ಮೇಲೆ ನಿಗಾಯಿರಿಸಲಿವೆ. ಸಮಾಜದ ಸ್ವಾಸ್ಥ್ಯ ಹಾಳು ಮಾಡುವ ಪೋಸ್ಟ್ ಗಳನ್ನು ಕೂಡಲೇ ಅಧಿಕಾರಿಗಳ ಮತ್ತು ರಾಜ್ಯ ಸಾಮಾಜಿಕ ಜಾಲತಾಣ ನಿಗಾ ಘಟಕದ ಗಮನಕ್ಕೆೆ ತರಲಾಗುತ್ತಿದೆ. ಜಾಲತಾಣ ನಿರ್ವಹಿಸಲು ಸರ್ಕಾರ ಖಾಸಗಿಯವರಿಗೆ ವಹಿಸಿಲ್ಲ ಎಂದು ಸ್ಪಷ್ಟಪಡಿಸಿದರು.
ವಿಶೇಷ ಶ್ವಾನದಳ:
ಪರಪ್ಪನ ಅಗ್ರಹಾರ ಜೈಲಿನಲ್ಲಿ ಅವ್ಯಾಹತವಾಗಿ ಸರಬರಾಜು ಆಗುವ ಮಾದಕ ವಸ್ತುಗಳನ್ನು ಪತ್ತೆ ಹಚ್ಚಲು ಮೊದಲ ಬಾರಿಗೆ ವಿಶೇಷ ಶ್ವಾನದಳ ಸ್ಥಾಪಿಸಲಾಗಿದೆ ಎಂದು ಗೃಹ ಸಚಿವ ಜಿ.ಪರಮೇಶ್ವರ್ ಮಾಹಿತಿ ನೀಡಿದ್ದಾರೆ.
ಬಿಜೆಪಿ ಸದಸ್ಯ ಪ್ರತಾಪ್ ಸಿಂಹ ನಾಯಕ್ ಕೇಳಿದ ಮತ್ತೊಂದು ಪ್ರಶ್ನೆಗೆ ಉತ್ತರಿಸಿದ ಅವರು, ಜೈಲಿನಲ್ಲಿ ಕಾನೂನುಬಾಹಿರ ಚಟುವಟಿಕೆ ನಡೆಯುವುದು ಹೊಸದೇನಲ್ಲ. ಒಂದಲ್ಲ ಒಂದು ರೀತಿ ನಿರಂತರ ಅಕ್ರಮ ಚಟುವಟಿಕೆ ನಡೆಯುತ್ತಿದೆ. ಜೈಲು ವಾರ್ಡನ್ಗಳು ನಿರಂತರ ತಪಾಸಣೆ ನಡೆಸಿದರೂ ಅನಿರೀಕ್ಷಿತವಾಗಿ ಡ್ರಗ್ಸ್ ಸರಬರಾಜು ಆಗುತ್ತಿದೆ ಎಂದು ಹೇಳಿದರು.
ಸಿಬ್ಬಂದಿಗಳ ವಿರುದ್ಧ ಕರ್ತವ್ಯಲೋಪದ ಬಗ್ಗೆ ದೂರುಗಳು ಬಂದಿದ್ದರಿಂದ ಬಿಗಿ ತಪಾಸಣೆ ನಡೆಸುವ ಸಂಬಂಧ ಕರ್ನಾಟಕ ಕೈಗಾರಿಕಾ ಭದ್ರತಾ ಪಡೆ (ಕೆಎಸ್ಐಎಫ್) ಸಿಬ್ಬಂದಿಯನ್ನ ನಿಯೋಜಿಸಲಾಗಿದೆ. ಅದೇ ರೀತಿ ಜೈಲಿನಲ್ಲಿ ಮಾದಕ ವಸ್ತು ಪತ್ತೆ ಹಚ್ಚಲು ಬೆಲ್ಜಿಯಂ ತಳಿಯ ಎರಡು ಶ್ವಾನ ಖರೀದಿಸಿ ತರಬೇತಿ ನೀಡಿ ಶ್ವಾನದಳ ಸ್ಥಾಪಿಸಲಾಗಿದೆ ಎಂದು ಹೇಳಿದರು.
ನಿಷೇಧಿತ ವಸ್ತುಗಳಿಗೆ ನಿಗಾ:
ಕಾರಾಗೃಹದಲ್ಲಿ ಬಂದಿಗಳು ಮೊಬೈಲ್ ಹಾಗೂ ನಿಷೇಧಿತ ವಸ್ತುಗಳನ್ನು ಬಳಸದಂತೆ ತಡೆಯಲು ರಾಜ್ಯದ ಕೇಂದ್ರ ಕಾರಾಗೃಹಗಳಾದ ಬೆಂಗಳೂರು, ಮೈಸೂರು, ಬೆಳಗಾವಿ, ಬಳ್ಳಾರಿ, ಧಾರವಾಡ, ವಿಜಯಪುರ, ಕಲಬುರ್ಗಿ, ಶಿವಮೊಗ್ಗ ಮತ್ತು ಮಂಗಳೂರು ಜಿಲ್ಲಾ ಕಾರಾಗೃಹಕ್ಕೆ ಈಗಾಗಲೇ ಕೆಎಸ್ಐಎಸ್‌ಎಫ್ ಸಿಬ್ಬಂದಿಗಳನ್ನು ನಿಯೋಜಿಸಲಾಗಿದೆ ಎಂದರು.
ಬೆಂಗಳೂರು ಸೆಂಟ್ರಲ್ ಜೈಲಿನಲ್ಲಿ ಅತ್ಯಾಧುನಿಕ 280 ಸಿಸಿಟಿವಿ ಕ್ಯಾಮರಾ ಅಳವಡಿಸಲಾಗಿದೆ. ಕೇಂದ್ರದ ಕಾರಾಗೃಹ ಆಧುನೀಕರಣ ಯೋಜನೆಯಡಿ ಭದ್ರತೆ ಹಾಗೂ ತಪಾಸಣೆಗಾಗಿ 9 ಬ್ಯಾಗೇಜ್ ಸ್ಕ್ಯಾನರ್, 350 ವಾಕಿಟಾಕಿಗಳನ್ನು ಖರೀದಿಸಲಾಗಿದೆ. ಮೊಬೈಲ್ ಫೋನ್ ಬಳಕೆ ತಡೆಯಲು ಹೈರೆಸ್ಯೂಲೇಷನ್ ಹೊಂದಿರುವ 3 ಟವರ್ ಹಾಕಲಾಗಿದೆ. ಬೇರೆ ಕಾರಾಗೃಹಗಳಲ್ಲಿ 66 ಮೊಬೈಲ್ ಜಾಮರ್ಗಳನ್ನ ದುರಸ್ತಿ ಹಾಗೂ 2ಜಿಯಿಂದ 4/5 ಜಿಗೆ ಮೇಲ್ದಜೇಗೇರಿಸಲು ಕ್ರಮ ಕೈಗೊಳ್ಳಲಾಗಿದೆ ಎಂದು ಮಾಹಿತಿ ನೀಡಿದರು.
248 ಪ್ರಕರಣ ದಾಖಲು:
ಜೈಲಿನಲ್ಲಿ ನಿಷೇಧಿತ ವಸ್ತುಗಳನ್ನು ಇಟ್ಟುಕೊಂಡಿದ್ದವರ ವಿರುದ್ಧ 248 ಪ್ರಕರಣಗಳನ್ನು ಸಂಬಂಧಿಸಿದ ಪೊಲೀಸ್ ಠಾಣೆಗಳಲ್ಲಿ ದಾಖಲಿಸಲಾಗಿದೆ. ಈ ಪೈಕಿ 9 ಪ್ರಕರಣಗಳಿಂದ 22 ಮಂದಿ ಅಧಿಕಾರಿ ಹಾಗೂ ಸಿಬ್ಬಂದಿ ವಿರುದ್ಧ ಪ್ರಕರಣ ದಾಖಲಾಗಿದೆ ಸಚಿವರು ತಿಳಿಸಿದರು.