Menu

ಮದುವೆಯಾಗುವುದಾಗಿ ನಂಬಿಸಿ ಸಿಐಎಸ್‌ಎಫ್‌ ಕಾನ್ಸ್‌ಟೇಬಲ್‌ ಗೆ 18 ಲಕ್ಷ ರೂ. ವಂಚನೆ

ಕೇಂದ್ರ ಕೈಗಾರಿಕಾ ಭದ್ರತಾ ಪಡೆಯ ಮಹಿಳಾ ಕಾನ್ಸ್​ಟೇಬಲ್ ಗೆ ಮ್ಯಾಟ್ರಿಮೋನಿ ತಾಣದಲ್ಲಿ ಪರಿಚಯವಾದ ವ್ಯಕ್ತಿ 18 ಲಕ್ಷ ರೂ. ವಂಚನೆ ಮಾಡಿರುವುದು ಬೆಳಕಿಗೆ ಬಂದಿದೆ. ಸಂತ್ರಸ್ತೆಯು ಮ್ಯಾಟ್ರಿಮೋನಿ ತಾಣಗಳಲ್ಲಿ ಜೀವನ ಸಂಗಾತಿಯನ್ನು ಹುಡುಕುವಾಗ ಅಶೋಕ್ ಮುಸ್ತಿ ಎಂಬಾತ ಪರಿಚಯವಾಗಿದ್ದಾನೆ.

ತೆಲಂಗಾಣ ಮೂಲದ ಆತ ಸರ್ಕಾರಿ ಉದ್ಯೋಗಕ್ಕಾಗಿ ತಯಾರಿ ಮಾಡುತ್ತಿದ್ದೇನೆ ಎಂದು ನಂಬಿಸಿ ಮದುವೆ ಮಾತುಕತೆ ಮುಗಿಸಿ ವಂಚನೆ ಎಸಗಿದ್ದಾನೆ.

ಮದುವೆಯಾಗುವುದಾಗಿ ನಂಬಿಸಿದ್ದ ಆರೋಪಿ ಆಗಾಗ ಮನೆಗೂ ಬರುತ್ತಿದ್ದ ಆರೋಪಿ, ವರದಕ್ಷಿಣೆ ಹಣವಾಗಿ 20 ಲಕ್ಷ ರೂ.ಗೆ ಬೇಡಿಕೆ ಇಟ್ಟಿದ್ದ. ಸಂತ್ರಸ್ತೆ 18 ಲಕ್ಷ ರೂಪಾಯಿ ವರ್ಗಾವಣೆ ಮಾಡಿದ್ದಾರೆ. ಆರೋಪಿ ನಂತರ ಮದುವೆ ನಿರಾಕರಿಸಿದ್ದ. ಈ ಬಗ್ಗೆ ಸಂತ್ರಸ್ತೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ದಾಬಸ್ ಪೇಟೆ ಪೊಲೀಸರಿಗೆ ದೂರು ನೀಡಿದ್ದಾರೆ.

ದಾಬಸ್ ಪೇಟೆ ಪೊಲೀಸರು ಐಪಿಸಿ ಸೆಕ್ಷನ್ 318, 321, 190 ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡು ಆರೋಪಿಯ ಪತ್ತೆಗೆ ಕ್ರಮ ಕೈಗೊಂಡಿರುವುದಾಗಿ ತಿಳಿಸಿದ್ದಾರೆ.

Related Posts

Leave a Reply

Your email address will not be published. Required fields are marked *