24 ಗಂಟೆಯಲ್ಲಿ 2.95 ಲಕ್ಷ ಹೊಸ ಕೊರೋನ ಪ್ರಕರಣ ದಾಖಲು, 2,023 ಮಂದಿ ಸಾವು

24 ಗಂಟೆಯಲ್ಲಿ 2.95 ಲಕ್ಷ ಹೊಸ ಕೊರೋನ ಪ್ರಕರಣ ದಾಖಲು, 2,023 ಮಂದಿ ಸಾವು

ನವದೆಹಲಿ: ಕಳೆದೊಂದು ದಿನದಲ್ಲಿ ದೇಶದಲ್ಲಿ 2,95,041 ಹೊಸ ಕೊರೊನಾ ಸೋಂಕು ಪ್ರಕರಣಗಳು ಪತ್ತೆಯಾಗಿವೆ. 2,023 ಮಂದಿ ಸೋಂಕಿನಿಂದ ಸಾವನ್ನಪ್ಪಿದ್ದಾರೆ. 1,67,457 ಮಂದಿ ಸೋಂಕಿನಿಂದ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ.

ದೇಶದಲ್ಲಿ ಈವರೆಗೆ ಒಟ್ಟು 1,56,16,130 ಕೊರೊನಾ ಪ್ರಕರಣಗಳು ದಾಖಲಾಗಿವೆ. 1,32,76,039 ಸೋಂಕಿತರು ಗುಣಮುಖರಾಗಿದ್ದಾರೆ. ಸುಮಾರು 1,82,553 ಮಂದಿ ಕೊರೊನಾ ಸೋಂಕಿಗೆ ಬಲಿಯಾಗಿದ್ದಾರೆ. ಪ್ರಸ್ತುತ ದೇಶದಲ್ಲಿ 21,57,538 ಸಕ್ರಿಯ ಕೋವಿಡ್​ ಪ್ರಕರಣಗಳಿವೆ.

,

Leave a Reply

Your email address will not be published. Required fields are marked *