Menu

ಟಿಸಿಎಸ್ ಕಂಪನಿಗೆ 99 ಪೈಸೆಗೆ 21.6 ಎಕರೆ: ಬೆಂಗಳೂರಿಂದ ಸೆಳೆಯಲು ಆಂಧ್ರ ಸರ್ಕಾರ ತಂತ್ರ

ಆಂಧ್ರಪ್ರದೇಶಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಐಟಿ ಕಂಪನಿಗಳನ್ನು ಆಕರ್ಷಿಸಲು ಅಲ್ಲಿನ ಸರ್ಕಾರ ಮುಂದಾಗಿದ್ದು, ಟಾಟಾ ಸಮೂಹದ ಟಿಸಿಎಸ್ ಕಂಪನಿಗೆ ವಿಶಾಖಪಟ್ಟಣದಲ್ಲಿ ಕಚೇರಿ ತೆರೆಯಲು ಕೇವಲ 99 ಪೈಸೆಗೆ 21.6 ಎಕರೆ ಭೂಮಿಯನ್ನು ನೀಡಿದೆ.

ಸಚಿವ ಸಂಪುಟ ಸಭೆಯಲ್ಲಿ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಈ ಪ್ರಸ್ತಾಪಕ್ಕೆ ಅನುಮೋದನೆ ನೀಡಿದ್ದಾರೆ. ಐಟಿ ಹಬ್ ಆಗಿರುವ ಬೆಂಗಳೂರಿಗೆ ಸೆಡ್ಡು ಹೊಡೆಯಲು ಈ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ವಿಶ್ಲೇಷಿಸಲಾಗುತ್ತಿದೆ. ವಿಶಾಖಪಟ್ಟಣದ 21.6 ಎಕರೆ ಭೂಮಿಯಲ್ಲಿ ಟಾಟಾ ಕನ್ಸಲ್ಟೆನ್ಸಿ ಸರ್ವೀಸ್ ಕಂಪನಿಯು ಕಚೇರಿ ತೆರೆಯಲಿದೆ. ಈ ಕಚೇರಿಗೆ ಕಂಪನಿ 1370 ಕೋಟಿ ರೂ. ಹೂಡಿಕೆ ಮಾಡಲಿದ್ದು, ಮುಂದಿನ 2-3 ವರ್ಷದಲ್ಲಿ 12,000 ಉದ್ಯೋಗ ಸೃಷ್ಟಿ ಯಾಗಲಿದೆ. ರಾಜ್ಯಕ್ಕೆ ಈ ಕಂಪನಿಯನ್ನು ಕರೆತರುವಲ್ಲಿ ಐಟಿ ಸಚಿವ ನಾರಾ ಲೋಕೇಶ್ ಪಾತ್ರ ಅಧಿಕವಾಗಿದೆ ಎಂದು ಹೇಳಲಾಗಿದೆ.

ಬೆಂಗಳೂರಿನಲ್ಲಿ ಮಳೆ ಅವಾಂತರವಾಗಿ ಮೂಲಸೌಕರ್ಯದ ಬಗ್ಗೆ ಭಾರೀ ಟೀಕೆ ವ್ಯಕ್ತವಾದಾಗ ಆಂಧ್ರದ ರಾಜಕಾರಣಿಗಳು ಕರ್ನಾಟಕ ಬಿಟ್ಟು ಆಂಧ್ರಕ್ಕೆ ಬನ್ನಿ ಎಂದು ಐಟಿ-ಬಿಟಿ ಕಂಪನಿಗಳಿಗೆ ಆಫರ್ ನೀಡಿದ್ದರೂ ಯಾವುದೇ ಕಂಪನಿಗಳು ಹೋಗಿರಲಿಲ್ಲ, ಆಂಧ್ರ ಸರ್ಕಾರ ಆಫರ್ ಮೂಲಕ ಐಟಿ ಕಂಪನಿಗಳ ಸೆಳೆಯಲು ತಂತ್ರ ರೂಪಿಸಿದೆ.

ನರೇಂದ್ರ ಮೋದಿ ಗುಜರಾತ್ ಮುಖ್ಯಮಂತ್ರಿಯಾಗಿದ್ದಾಗ ಟಾಟಾ ಮೋಟರ್ಸ್ ಕಂಪನಿಗೆ ಗುಜರಾತ್‌ನ ಸನ್ನದ್‌ನಲ್ಲಿ 99 ಪೈಸೆಗೆ ಸ್ಥಳ ನೀಡಿದ್ದರು. ಈ ಕ್ರಮದಿಂದಾಗಿ ಗುಜರಾತ್‌ನಲ್ಲಿ ಉದ್ಯಮಗಳ ಹರಿವು ಹೆಚ್ಚಾಗಿತ್ತು.

Related Posts

Leave a Reply

Your email address will not be published. Required fields are marked *