ಎರಡು ಪ್ರತ್ಯೇಕ ಕಾರ್ಯಾಚರಣೆಯಲ್ಲಿ 22 ನಕ್ಸಲರನ್ನು ಎನ್ ಕೌಂಟರ್ ಮಾಡಲಾಗಿದ್ದು, ಗುಂಡಿನ ಚಕಮಕಿಯಲ್ಲಿ ಒಬ್ಬ ಪೊಲೀಸ್ ಹುತಾತ್ಮರಾದ ಘಟನೆ ಛತ್ತೀಸಗಢದಲ್ಲಿ ನಡೆದಿದೆ.
ಪೊಲೀಸರು ಬಿಜಾಪುರ್ ಮತ್ತು ಕಾಂಕೇರ್ ಗಳಲ್ಲಿ ನಡೆದ ಎರಡು ಪ್ರತ್ಯೇಕ ಕಾರ್ಯಾಚರಣೆಯಲ್ಲಿ 22 ನಕ್ಸಲರನ್ನು ಹತ್ಯೆಗೈದಿದ್ದಾರೆ.
ಗಂಗಲೂರ್ ಬಳಿಯ ದಾಂತೇವಾಡ ಗಡಿ ಭಾಗದ ಬಿಜಾಪುರ್ ನಲ್ಲಿ 18 ಮತ್ತು ಕಾಂಕೇರ್ ನಲ್ಲಿ 4 ನಕ್ಸಲರು ಬಲಿಯಾಗಿದ್ದಾರೆ.
ಭದ್ರತಾ ಸಿಬ್ಬಂದಿ ಮತ್ತು ನಕ್ಸಲರ ನಡುವೆ ಭಾರೀ ಪ್ರಮಾಣದಲ್ಲಿ ಗುಂಡಿನ ಚಕಮಕಿ ನಡೆದಿದೆ ಎಂದು ತಿಳಿದು ಬಂದಿದ್ದು, ಅಪಾರ ಪ್ರಮಾಣದ ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಳ್ಲಲಾಗಿದೆ.