ಆಕ್ಸಿಜನ್ ಮತ್ತು ರೆಮಿಡಿಸಿವಿರ್ ಪೂರೈಕೆಗೆ 24/7 ವಾರ್ ರೂಮ್ ಸ್ಥಾಪನೆ : ಸಚಿವ ಡಾ. ಸುಧಾಕರ್

ಆಕ್ಸಿಜನ್ ಮತ್ತು ರೆಮಿಡಿಸಿವಿರ್ ಪೂರೈಕೆಗೆ 24/7 ವಾರ್ ರೂಮ್ ಸ್ಥಾಪನೆ : ಸಚಿವ ಡಾ. ಸುಧಾಕರ್

ಬೆಂಗಳೂರು : ಕೋವಿಡ್ ರೂಪಾಂತರಿ ಅಲೆ ರಾಜ್ಯದಲ್ಲಿ ನಿತ್ಯ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ನಿನ್ನೆ(ಏಪ್ರಿಲ್ 20) ರಾತ್ರಿ ವೀಕೆಂಡ್ ಲಾಕ್ ಡೌನ್, ವಾರದ ಐದು ದಿನಗಳ ನೈಟ್ ಕರ್ಫ್ಯೂ ಘೋಷಣೆ ಮಾಡಿ ಕೆಲವು ಕಠಿಣ ನಿರ್ಬಂಧಗಳನ್ನು ಹೇರಿದೆ.

ರಾಜ್ಯದಲ್ಲಿ ಕೋವಿಡ್ ಸೋಂಕಿನ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಎರಡು ವಾರಗಳ ಭಾಗಶಃ ಲಾಕ್ ಡೌನ್ ರಾಜ್ಯದಲ್ಲಿರಲಿದೆ.

ಕೋವಿಡ್ ಸೋಂಕಿನ ಪಾಸಿಟಿವ್ ಪ್ರಕರಣಗಳ ಸಂಖ್ಯೆ ಏರಿಕೆಯಾಗುತ್ತಿರುವುದರ ಜೊತೆಗೆ ರಾಜ್ಯದಲ್ಲಿ ಕೋವಿಡ್ ನಿಂದ ಮೃತಪಡುತ್ತಿರುವರ ಸಂಖ್ಯೆಯೂ ಏರಿಕೆಯಾಗುತ್ತಿದ್ದು, ಆಮ್ಲಜನಕದ ಕೊರತೆಯೇ ಕಾರಣ ಎಂದು ಪ್ರತಿ ಪಕ್ಷಗಳು ಆಡಳತ ಪಕ್ಷವನ್ನು ಆರೋಫ ಮಾಡುತ್ತಿವೆ.

ಈ ವಿಚಾರಕ್ಕೆ ಪೂರಕವಾಗುವಂತೆ, ಆರೋಗ್ಯ ಸಚಿವ ಡಾ. ಕೆ. ಸುಧಾಕರ್ ಇಂದು ಆಕ್ಸಿಜನ್ ಮತ್ತು ರೆಮಿಡಿಸಿವಿರ್ ಪೂರೈಕೆಗೆ 24/7 ವಾರ್ ರೂಮ್ ಸ್ಥಾಪಿಸಲಾಗಿದ್ದು, ಸಿಬ್ಬಂದಿಗಳು 3 ಪಾಳಿಗಳಲ್ಲಿ ಕಾರ್ಯನಿರ್ವಹಿಸಲಿದ್ದಾರೆ ಎಂದು ಟ್ವೀಟ್ ಮಾಡಿದ್ದಾರೆ.

, ,

Leave a Reply

Your email address will not be published. Required fields are marked *