Menu

3 ತಿಂಗಳು ಬಿರು ಬಿಸಿಲು‌ ಸಾಮಾನ್ಯ ತಾಪಮಾನ

heat wave

ಬೆಂಗಳೂರು: ಮಾರ್ಚ್- ಎಪ್ರಿಲ್‌ ಮೇ ಅಂತ್ಯದವರೆಗೂ ಉತ್ತರ ಕರ್ನಾಟಕದಲ್ಲಿ ತೀವ್ರ ಬಿಸಿಲು ಕಾಡುವ ಬೆನ್ನಲ್ಲೇ,ವಾಡಿಕೆಗಿಂತ ಅಧಿಕ ಮುಂಗಾರು ಮಳೆಯಿಂದಾಗಿ ದಕ್ಷಿಣ ಕರ್ನಾಟಕದಲ್ಲಿ ಸಾಮಾನ್ಯ ತಾಪಮಾನ ಇರಲಿದೆ ಎಂದು ಹವಾಮಾನ ಮುನ್ಸೂಚನೆ ಇದೆ.

ಮಾರ್ಚ್ ನಿಂದ ಮೇ ತಿಂಗಳವರೆಗೆ ಕರ್ನಾಟಕದಲ್ಲಿ ತೀವ್ರ ಬಿಸಿಲು ಮತ್ತು ಇದೇ ಸಂದರ್ಭದಲ್ಲಿ ಅಧಿಕ ಮಳೆಯೂ ಆಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ.

ಬೆಂಗಳೂರು ಸೇರಿದಂತೆ, ದಕ್ಷಿಣ ಕರ್ನಾಟಕದಲ್ಲಿ ಮುಂಗಾರು ಪೂರ್ವ ಮಳೆ ಸಾಮಾನ್ಯಕ್ಕಿಂತ ಹೆಚ್ಚಾಗಿ ಬೀಳುವ ಸಾಧ್ಯತೆಯಿದೆ.
ಉತ್ತರ ಕರ್ನಾಟಕದ ಜಿಲ್ಲೆಗಳು, ವಿಶೇಷವಾಗಿ ಕಲ್ಯಾಣ-ಕರ್ನಾಟಕ, 2-4 ದಿನಗಳ ಕಾಲ ತೀವ್ರವಾದ ಬಿಸಿಗಾಳಿ ಅನುಭವಿಸುವ ನಿರೀಕ್ಷೆಯಿದೆ.

ಕರಾವಳಿ ಕರ್ನಾಟಕ ಮತ್ತು ಮಲೆನಾಡು ಪ್ರದೇಶಗಳಲ್ಲಿ ಶೇ.50-60 ರಷ್ಟು ಹೆಚ್ಚುವರಿ ಮಳೆಯಾಗುವ ಸಾಧ್ಯತೆಯಿದೆ. ಬೆಂಗಳೂರು ಸೇರಿದಂತೆ ಒಳನಾಡಿನ ಜಿಲ್ಲೆಗಳಲ್ಲಿ ಶೇ.30-40 ರಷ್ಟು ಹೆಚ್ಚಿನ ಮುಂಗಾರು ಪೂರ್ವ ಮಳೆಯಾಗಬಹುದು. ಈ ಮಳೆಯಿಂದಾಗಿ, ದಕ್ಷಿಣ ಒಳನಾಡಿನ ಕರ್ನಾಟಕದಲ್ಲಿ ತಾಪಮಾನವು ಸಾಮಾನ್ಯವಾಗಿರುತ್ತದೆ. ಆದರೆ ಹಗಲಿನಲ್ಲಿ ಬಿಸಿಲು ಇರುತ್ತದೆ ಎಂದು ವರದಿ ಹೇಳಿದೆ.

ಈಶಾನ್ಯ ಕರ್ನಾಟಕದಲ್ಲಿ ಮಾರ್ಚ್ ತಿಂಗಳಿನಲ್ಲಿ 43 ಡಿಗ್ರಿ ಸೆಲ್ಸಿಯಸ್ ನಿಂದ 45 ಡಿಗ್ರಿ ಸೆಲ್ಸಿಯಸ್ ನಡುವೆ ತಾಪಮಾನ ಏರಿಕೆಯಾಗುವ ಸಾಧ್ಯತೆಯಿದೆ. ಏಪ್ರಿಲ್ ಮತ್ತು ಮೇ ತಿಂಗಳಿನಲ್ಲಿ ಬಿಸಿಲಿನ ತೀವ್ರತೆ ಕಡಿಮೆಯಾಗಬಹುದು. ಆದರೆ ಉತ್ತರ ಕರ್ನಾಟಕದಾದ್ಯಂತ ಹೆಚ್ಚಾಗುವ ಸಾಧ್ಯತೆಯಿದೆ.

ನಗರದ ಹಿರಿಯ ವಿಜ್ಞಾನಿ ಸಿ.ಎಸ್. ಪಾಟೀಲ್ ಮಾತನಾಡಿ, “2024 ರ ಬೇಸಿಗೆಗಿಂತ ಭಿನ್ನವಾಗಿ, ಬೆಂಗಳೂರು ಮತ್ತು ಸುತ್ತಮುತ್ತಲಿನ ಜಿಲ್ಲೆಗಳಲ್ಲಿ ಸಾಮಾನ್ಯ ತಾಪಮಾನ ಇರುತ್ತದೆ ಎಂದು ಹೇಳಿದ್ದಾರೆ.

Related Posts

Leave a Reply

Your email address will not be published. Required fields are marked *