ಪ್ರಸಿದ್ಧ ಪುಣ್ಯಕ್ಷೇತ್ರ ಸವದತ್ತಿ ಯಲ್ಲಮ್ಮ ದೇವಸ್ಥಾನ ಹಾಗೂ ದೇವಿಕಾರಾಣಿ ಎಸ್ಟೇಟ್ ಅಭಿವೃದ್ಧಿಗೆ 398 ಕೋಟ ರೂ. ಮೀಸಲಿಡುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ.
ಬುಧವಾರ ಮಂಡಿಸಿದ ೨೦೨೫-೨೬ನೇ ಸಾಲಿನ ಬಜೆಟ್ ನಲ್ಲಿ ಉತ್ತರ ಕರ್ನಾಟಕದ ಸವದತ್ತಿ ಯಲ್ಲಮ್ಮ ದೇವಸ್ಥಾನದ ಅಭಿವೃದ್ಧಿಗೆ ೧೯೯ ಕೋಟಿ ರೂ. ಹಾಗೂ ದೇವಿಕಾರಾಣಿ ಎಸ್ಟೇಟ್ ಅಭಿವೃದ್ಧಿಗೆ 199 ಕೋಟಿ ರೂ. ಘೋಷಿಸಿದರು.
ಬೇಲೂರು-ಹಳೇಬೀಡು ಹಾಗೂ ಸೋಮನಾಥಪುರ ದೇವಾಲಯಗಳ ಮೂಲಸೌಕರ್ಯ ಅಭಿವೃದ್ಧಿಗೆ ಅಗತ್ಯ ನೆರವು ನೀಡಲಾಗುವುದು. ಅಲ್ಲದೇ ರಾಜ್ಯದ 10 ಜಿಲ್ಲೆಗಳ ಪ್ರವಾಸಿ ತಾಣಗಳ ಅಭಿವೃದ್ಧಿಗೆ 50 ಕೋಟಿ ರೂ. ಮೀಸಲಿಡುವುದಾಗಿ ಸಿದ್ದರಾಮಯ್ಯ ಘೋಷಿಸಿದರು.
ಇದೇ ವೇಳೆ ರಾಜ್ಯದ ದೇವಸ್ಥಾನಗಳ ಜಾಗಗಳ ಒತ್ತುವರಿ ತೆರವುಗೊಳಿಸಿ ದೇವಾಲಯಗಳಿಗೆ ಆಸ್ತಿ ವಾಪಸ್ ಕೊಡಿಸುವ ಕೆಲಸ ಮಾಡಲಾಗುವುದು ಎಂದು ಸಿಎಂ ಬಜೆಟ್ ನಲ್ಲಿ ಪ್ರಕಟಿಸಿದರು.