ಬೆಂಗಳೂರು, ಅಕ್ಟೋಬರ್ 20: ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ ವತಿಯಿಂದ ಮುಖ್ಯಮಂತ್ರಿಯವರ ಪರಿಹಾರ ನಿಧಿಗೆ 4.39 ಕೋಟಿ ರೂ. ಗಳ ಮೊತ್ತದ ಚೆಕ್ ನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಇಂಧನ ಸಚಿವ ಸುನಿಲ್ ಕುಮಾರ್ ಹಸ್ತಾಂತರಿಸಿದರು.
ಇಂಧನ ಸಚಿವ ಸುನೀಲ್ ಕುಮಾರ್, ಸಚಿವ ಆರ್. ಅಶೋಕ್ ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ ಅಧಿಕಾರಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.