ರಾಜ್ಯಾದ್ಯಂತ ಸಕ್ಕರೆ ಕಾರ್ಖಾನೆಗಳು ಕಬ್ಬು ಪೂರೈಸಿದ ರೈತರಿಗೆ 4,482 ಕೋಟಿ ರೂಪಾಯಿ ಬಾಕಿ ಉಳಿಸಿಕೊಂಡಿದ್ದು, ರೈತರ ಸಂಕಷ್ಟ ಕೇಳಲು ರಾಜ್ಯದಲ್ಲಿ ಸರ್ಕಾರವೇ ಇಲ್ಲದ ಪರಿಸ್ಥಿತಿ ಎದುರಾಗಿರುವುದರಿಂದ ರೈತರು ಅನಾಥರಾಗಿದ್ದಾರೆ. ಕಬ್ಬು ಪೂರೈಸಿದ 14 ದಿನಗಳಲ್ಲಿ ಬಿಲ್ ಮೊತ್ತ ಪಾವತಿಸಬೇಕು ಎಂಬ ಕಾಯ್ದೆ ಇದ್ದರೂ ಸಹ, ನಿಯಮವನ್ನ ಜಾರಿ ಮಾಡಲು ಕಾಂಗ್ರೆಸ್ ಸರ್ಕಾರ ಇಚ್ಛಾಶಕ್ತಿ ತೋರುತ್ತಿಲ್ಲ ಎಂದು ಪ್ರಿಪಕ್ಷ ನಾಯಕ ಆರ್. ಅಶೋಕ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ರಾಜ್ಯಾದ್ಯಂತ ಸಕ್ಕರೆ ಕಾರ್ಖಾನೆಗಳು ಕಬ್ಬು ಪೂರೈಸಿದ ರೈತರಿಗೆ 4,482 ಕೋಟಿ ರೂಪಾಯಿ ಬಾಕಿ ಉಳಿಸಿಕೊಂಡಿದ್ದು, ರೈತರ ಸಂಕಷ್ಟ ಕೇಳಲು ರಾಜ್ಯದಲ್ಲಿ ಸರ್ಕಾರವೇ ಇಲ್ಲದ ಪರಿಸ್ಥಿತಿ ಎದುರಾಗಿರುವುದರಿಂದ ರೈತರು ಅನಾಥರಾಗಿದ್ದಾರೆ.
ಕಬ್ಬು ಪೂರೈಸಿದ 14 ದಿನಗಳಲ್ಲಿ ಬಿಲ್ ಮೊತ್ತ ಪಾವತಿಸಬೇಕು ಎಂಬ ಕಾಯ್ದೆ ಇದ್ದರೂ ಸಹ, ನಿಯಮವನ್ನ ಜಾರಿ ಮಾಡಲು… pic.twitter.com/CcbGXXIr54
— R. Ashoka (@RAshokaBJP) January 16, 2025
ಸಿಎಂ ಸಿದ್ದರಾಮಯ್ಯ ನವರೇ, ನಾಡಿನ ರೈತರ ಬದುಕು ಸುಭದ್ರ ಪಡಿಸಬೇಕಾದ ತಾವು ನಿಮ್ಮ ಕುರ್ಚಿ ಭದ್ರ ಪಡಿಸಿಕೊಳ್ಳುವುದರಲ್ಲೇ ಕಾಲ ಕಳೆದರೆ, ನಾಡಿನ ರೈತರ ಕಷ್ಟಕ್ಕೆ ಸ್ಪಂದಿಸುವವರು ಯಾರು, ನಿಮ್ಮ ಸರ್ಕಾರ ಸತ್ತಿದೆಯೋ ಅಥವಾ ಬದುಕಿದೆಯೋ ಎಂದು ಪ್ರಶ್ನಿಸಿದ್ದಾರೆ.
ಈ ಕೂಡಲೇ ಕಬ್ಬು ಬೆಳೆಗಾರರ ಬಾಕಿ ಹಣ ಬಿಡುಗಡೆ ಮಾಡುವಂತೆ ಸಕ್ಕರೆ ಕಾರ್ಖಾನೆಗಳಿಗೆ ಸೂಚನೆ ನೀಡಿ ರೈತರ ನೆರವಿಗೆ ಬನ್ನಿ ಎಂದು ಮುಖ್ಯಮಂತ್ರಿಯನ್ನು ಆಗ್ರಹಿಸಿದ್ದಾರೆ.