ನಾಡಹಬ್ಬ ದಸರಾಗೆ ಚಾಲನೆ ನೀಡಿದ ಬೆನ್ನಲ್ಲೇ ಕೃಷ್ಣರಾಜ ಸಾಗರ (ಕೆಆರ್‌ಎಸ್) ಜಲಾಶಯದ ತೀರದಲ್ಲಿ “ಕಾವೇರಿ ಆರತಿ” ಎಂಬ ಐದು ದಿನಗಳ ಭವ್ಯ ಧಾರ್ಮಿಕ-ಸಾಂಸ್ಕೃತಿಕ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ ಎಂದು ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಎನ್. ಚಲುವರಾಯಸ್ವಾಮಿ ಮಂಗಳವಾರ ಮಾಹಿತಿ ಹಂಚಿಕೊಂಡರು.
ಸೆಪ್ಟೆಂಬರ್ 26 ರಿಂದ 30 ರವರೆಗೆ ನಡೆಯುವ ಈ ಕಾರ್ಯಕ್ರಮಕ್ಕೆ ಶುಕ್ರವಾರದಂದು ಸಂಜೆ 5 ಗಂಟೆಗೆ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಕಾವೇರಿ ನದಿಗೆ ಪುಷ್ಪಾರ್ಚನೆ ಸಲ್ಲಿಸುವ ಮೂಲಕ ಚಾಲನೆ ನೀಡಲಿದ್ದಾರೆ.
ಈ ಸಂಧರ್ಭದಲ್ಲಿ ಆದಿಚುಂಚನಗಿರಿ ಮಹಾ ಸಂಸ್ಥಾನ ಮಠದ ಪೀಠಾಧ್ಯಕ್ಷರಾದ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ, ಸುತ್ತೂರು ವೀರ ಸಿಂಹಾಸನ ಮಹಾ ಸಂಸ್ಥಾನ ಮಠಾಧ್ಯಕ್ಷರಾದ ಡಾ. ಶಿವರಾತ್ರಿ ದೇಶಿಕೇಂದ್ರ ಮಹಾ ಸ್ವಾಮೀಜಿ, ಸಿದ್ಧಗಂಗಾ ಮಠದ ಅಧ್ಯಕ್ಷರಾದ ಸಿದ್ದಲಿಂಗ ಸ್ವಾಮೀಜಿ, ವಿಶ್ವ ಒಕ್ಕಲಿಗ ಮಹಾ ಸಂಸ್ಥಾನ ಮಠದ ಪೀಠಾಧ್ಯಕ್ಷರಾದ ನಿಶ್ಚಲಾನಂದನಾಥ ಸ್ವಾಮೀಜಿಗಳು ಉಪಸ್ಥಿತರಿರುತ್ತಾರೆ
ಕಾರ್ಯಕ್ರಮದ ಪ್ರಮುಖ ಅಂಶಗಳು:
13 ಮಂದಿ ಆರತಿದಾರರು, ಪ್ರತಿ ಒಬ್ಬರಿಗೂ ಇಬ್ಬರು ಸಹಾಯಕರು ಸೇರಿ ಒಟ್ಟು 40 ಜನರ ತಂಡ ಭಾಗವಹಿಸುವುದು.
“ವಾತಾಪಿ ಗಣಪತಿಂ ಭಜೆ” ಮಂಗಳವಾದ್ಯದಿಂದ ಪೂಜೆಗೆ ಆರಂಭ.
ಕಾವೇರಿ ಪ್ರಾರ್ಥನೆ, ಗಣಪತಿ ಪ್ರಾರ್ಥನೆ, ಗುರು ಪ್ರಾರ್ಥನೆ ಹಾಗೂ ಸಂಕಲ್ಪ.
ಕಾವೇರಿ ಸ್ತೋತ್ರದ ಮೂಲಕ ತೀರ್ಥ ಪೂಜೆ ಮತ್ತು ಬಾಗಿನ ಅರ್ಪಣೆ.
ಬ್ರಹ್ಮ, ವಿಷ್ಣು, ಮಹೇಶ್ವರರ ಪ್ರಾರ್ಥನೆ ಹಾಗೂ ಚಾಮರ ಸೇವೆ.
ಮೂರು ದಿಕ್ಕುಗಳಲ್ಲಿ ಶಂಖನಾದ, ಧೂಪದ ಆರತಿ ಮತ್ತು ಮಂತ್ರಪುಷ್ಪ ಪಠಣ.
ಕೊನೆಗೆ ಕುಂಭಾರತಿ, ನಾಗಾರತಿ ಹಾಗೂ ಭವ್ಯ “ಕಾವೇರಿ ಆರತಿ”ಯೊಂದಿಗೆ ಪೂಜಾ ಕೈಂಕರ್ಯ ಸಂಪನ್ನ.