Menu

ಹುಬ್ಬಳ್ಳಿಯಲ್ಲಿ 5 ವರ್ಷದ ಬಾಲಕಿ ಮೇಲೆ ಅತ್ಯಾಚಾರ ಯತ್ನಿಸಿ ಕೊಲೆ

rape case

ಹುಬ್ಬಳ್ಳಿ: ಐದು ವರ್ಷದ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ ಕತ್ತು ಹಿಸುಕಿ ಕೊಲೆ ಮಾಡಿರುವ ಅಮಾನುಷ ಕೃತ್ಯ ಅಶೋಕನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಕೂಲಿ‌ ಕಾರ್ಮಿಕರಾಗಿದ್ದ ಅಪ್ರಾಪ್ತ ಬಾಲಕಿಯ ಹೆತ್ತವರು ಕೆಲಸಕ್ಕೆ ಹೋಗಿದ್ದ ವೇಳೆ ಮನೆ ಮುಂದೆ ಆಟವಾಡುತ್ತಿದ್ದ ಬಾಲಕಿಗೆ ಚಾಕೊಲೇಟ್ ಆಸೆ ತೋರಿಸಿ ಕರೆದೊಯ್ದಿದ್ದಾನೆ. ಬಾಲಕಿಯನ್ನು ಎತ್ತಿಕೊಂಡು ಹೋಗುತ್ತಿರುವ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಮುಂಜಾನೆಯಿಂದ ನಾಪತ್ತೆಯಾಗಿದ್ದ ಬಾಲಕಿಗಾಗಿ ಪೋಷಕರು ಹುಡುಕಾಟ ನಡೆಸಿದಾಗ ಅದ್ಯಾಪಕ ನಗರದಲ್ಲಿನ ಖಾಲಿ ಜಾಗದಲ್ಲಿ ಬಾಲಕಿ ಶವ ಪತ್ತೆಯಾಗಿದೆ.

ಲಕಿಯನ್ನು ಶೆಡ್ ಗೆ ಕರೆದುಕೊಂಡು ಹೋಗಿ ಅತ್ಯಾಚಾರಕ್ಕೆ ಯತ್ನಿಸಿದಾಗ ಬಾಲಕಿ ಕೂಗಾಟ ಕೇಳಿ ಶೆಡ್ ನತ್ತ ಸ್ಥಳೀಯರು ಧಾವಿಸುತ್ತಿದ್ದಂತೆ ಭಯಬಿದ್ದ ಸೈಕೋಪಾತ್ ಬಾಲಕಿ ಕತ್ತು ಹಿಸುಕಿ ಕೊಲೆ ಮಾಡಿ ಪರಾರಿಯಾಗಿದ್ದಾನೆ ಎಂದು ತಿಳಿದು ಬಂದಿದೆ.

ಬಾಲಕಿ ಹತ್ಯೆ ಖಂಡಿಸಿ ಅಶೋಕನಗರ ಠಾಣೆ ಎದುರು, ಆರೋಪಿಗೆ ಕಠಿಣ ಶಿಕ್ಷೆ ವಿಧಿಸುವಂತೆ ಆಗ್ರಹಿಸಿ ಸ್ಥಳೀಯರ ಧರಣಿ ನಡೆಸಿದರು. ಪ್ರತಿಭಟನಾ ಸ್ಥಳಕ್ಕೆ ಹುಬ್ಬಳ್ಳಿ-ಧಾರವಾಡ ಪೊಲೀಸ್​ ಆಯುಕ್ತ ಎನ್​. ಶಶಿಕುಮಾರ್ ಭೇಟಿ ನೀಡಿ ಬಾಲಕಿ ಪೋಷಕರಿಂದ ಮಾಹಿತಿ ಪಡೆದರು.

ಪ್ರಕರಣ ಸಂಬಂಭ ಪೊಲೀಸ್ ಆಯುಕ್ತ ಎನ್​. ಶಶಿಕುಮಾರ್ ಮಾತನಾಡಿ, “ಕೊಪ್ಪಳ ಮೂಲದ ಕುಟುಂಬ ಮನೆಗೆಲಸ, ಪೇಂಟಿಂಗ್ ಕೆಲಸ ಮಾಡುವ ಸಲುವಾಗಿ ಹುಬ್ಬಳ್ಳಿಗೆ ಬಂದು ನೆಲೆಸಿದೆ. ಮೃತಪಟ್ಟಿರುವ ಬಾಲಕಿಯ ತಂದೆ ಪೇಂಟಿಂಗ್ ಕೆಲಸ ಮಾಡುತ್ತಿದ್ದಾರೆ. ಬಾಲಕಿ ತಾಯಿ ಮನೆಗೆಲಸಕ್ಕೆ ತೆರಳುವಾಗ ಜೊತೆಯಲ್ಲೇ ಕರೆದೊಯ್ದಿದ್ದರು. ತಾಯಿ ಮನೆಯೊಳಗೆ ತೆರಳಿದ್ದಾಗ ಮಗು ಹೊರಗಡೆ ಆಟವಾಡುತ್ತಿತ್ತು. ಈ ಸಂದರ್ಭದಲ್ಲಿ ಮಗುವನ್ನು ಅಪರಿಚಿತ ಯುವಕ ಎತ್ತಿಕೊಂಡು ಹೋಗಿದ್ದಾನೆ” ಎಂದು ತಿಳಿಸಿದರು.

ಪಾಳುಬಿದ್ದ ಮನೆಯಲ್ಲಿ ಮಗುವಿನ ಮೃತದೇಹ ಪತ್ತೆಯಾಗಿದೆ. ಆರೋಪಿ ಯಾರು, ಆತನ ಹಿನ್ನೆಲೆ ಏನೆಂದು ಇದುವರೆಗೆ ಗೊತ್ತಾಗಿಲ್ಲ. ವೈದ್ಯಕೀಯ ತಪಾಸಣೆ ನಂತರ ಅತ್ಯಾಚಾರದ ಬಗ್ಗೆ ಗೊತ್ತಾಗಲಿದೆ. ಮೃತಪಟ್ಟ ಮಗುವಿನ ಕುಟುಂಬ ಸದಸ್ಯರು ದೂರು ನೀಡಿದ್ದಾರೆ. ಆರೋಪಿ ವಿರುದ್ಧ ಕ್ರಮ ಕೈಗೊಳ್ಳುತ್ತೇವೆ” ಎಂದು ಹೇಳಿದರು.

Related Posts

Leave a Reply

Your email address will not be published. Required fields are marked *