Saturday, February 22, 2025
Menu

ಕುಂಭಮೇಳಕ್ಕೆ ಹೊರಟ್ಟಿದ್ದ 6 ಮಂದಿ ಸಾವು: 5 ಲಕ್ಷ ರೂ. ಪರಿಹಾರ ಘೋಷಿಸಿದ ಈಶ್ವರ್ ಖಂಡ್ರೆ

eshwar khandre

ಕುಂಭಮೇಳಕ್ಕೆ ತೆರಳಿದ್ದ ಬೀದರ್ ನ 6 ಮಂದಿ ಅಪಘಾತದಲ್ಲಿ ಮೃತಪಟ್ಟ ಕುಟುಂಬಗಳಿಗೆ ಅರಣ್ಯ ಸಚಿವ ಈಶ್ವರ್ ಖಂಡ್ರೆ 5 ಲಕ್ಷ ರೂ. ಪರಿಹಾರ ಘೋಷಿಸಿದ್ದಾರೆ.

ಉತ್ತರ ಪ್ರದೇಶದ ಪ್ರಯಾಗ್ರಾಜ್ ನಲ್ಲಿ ನಡೆಯುತ್ತಿರುವ ಮಹಾ ಕುಂಭಮೇಳಕ್ಕೆ ತೆರಳಿದ್ದ ಬೀದರ್ ನ 12 ಮಂದಿ ಇದ್ದ ಕ್ರೂಸರ್ ಲಾರಿಗೆ ಹಿಂಬಡಿಯಿಂದ ಡಿಕ್ಕಿ ಹೊಡೆದಿತ್ತು. ದುರ್ಘಟನೆಯನ್ನು 6 ಮಂದಿ ಮೃತಪಟ್ಟಿದ್ದರು.

ಬೆಂಗಳೂರಿನಲ್ಲಿ ಮಾಧ್ಯಮ ಜೊತೆ ಮಾತನಾಡಿದ ಅವರು, ಲಾಡಗೇರಿಯ 12 ಜನರು ಪ್ರಯಾಣಿಸುತ್ತಿದ್ದ ಕ್ರೂಸರ್ ವಾಹನ ಮತ್ತು ಲಾರಿ ನಡುವೆ ಭೀಕರ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ಐವರು ಮೃತಪಟ್ಟಿದ್ದು, 9 ಜನರು ಗಾಯಗೊಂಡಿರುವ ಸುದ್ದಿ ತಿಳಿದು ಆಘಾತವಾಯಿತು ಎಂದರು.

ಅಪಘಾತದ ಮಾಹಿತಿ ಪಡೆಯಲಾಗುತ್ತಿದ್ದು, ಮೃತರ ಪಾರ್ಥವ ಶರೀರವನ್ನು ಬೀದರ್ಗೆ ತರಲು ಮತ್ತು ಗಾಯಾಳುಗಳಿಗೆ ಸೂಕ್ತ ಚಿಕಿತ್ಸೆಗೆ ವ್ಯವಸ್ಥೆ ಮಾಡಲು ಜಿಲ್ಲಾಡಳಿತಕ್ಕೆ ಸೂಚನೆ ನೀಡಲಾಗಿದೆ ಎಂದು ಅವರು ತಿಳಿಸಿದರು.

ಉತ್ತರಪ್ರದೇಶದಲ್ಲಿ ಕರ್ನಾಟಕದವರಾದ ಚನ್ನಪ್ಪ ಎಂಬ ಅಧಿಕಾರಿಯಿದ್ದು ಅವರೊಂದಿಗೆ ಮಾತನಾಡಿ, ಮೃತರ ಕುಟುಂಬಕ್ಕೆ 5 ಲಕ್ಷ ರೂ. ಪರಿಹಾರ ಮತ್ತು ಗಾಯಾಳುಗಳ ಕುಟುಂಬಕ್ಕೆ ಸೂಕ್ತ ನೆರವು ದೊರಕಿಸಲು ತಿಳಿಸಿದ್ದೇನೆ ಎಂದರು.

ಈ ಸಂಕಷ್ಟದ ಸಮಯದಲ್ಲಿ ಸರ್ಕಾರ ಅವರೊಂದಿಗೆ ನಿಲ್ಲುತ್ತದೆ. ಮೃತರ ಅಗಲಿಕೆಯ ನೋವನ್ನು ಸಹಿಸಿಕೊಳ್ಳುವ ಶಕ್ತಿಯನ್ನು ಅವರ ಕುಟುಂಬದವರಿಗೆ ದೇವರು ನೀಡಲಿ, ಗಾಯಾಳುಗಳು ಬೇಗ ಗುಣಮುಖರಾಗಲೆಂದು ಪ್ರಾರ್ಥಿಸುತ್ತೇನೆ ಎಂದು ಸಂತಾಪ ಸೂಚಿಸಿದ್ದಾರೆ.

Related Posts

Leave a Reply

Your email address will not be published. Required fields are marked *