ಬೆಂಗಳೂರಿನಲ್ಲಿ ಹಾಡಹಾಗಲೇ 7 ಕೋಟಿ 11 ಲಕ್ಷ ರೂ. ದರೋಡೆ ಮಾಡಿದ ಶಂಕಿತ ಆರೋಪಿಗಳ ಭಾವಚಿತ್ರವನ್ನು ಪೊಲೀಸರು ಬಿಡುಗಡೆ ಮಾಡಿದ್ದಾರೆ.
ಬೆಂಗಳೂರಿನ ಡೇರಿ ಸರ್ಕಲ್ ಮೇಲ್ಸುತುವೆ ಬಳಿ ಆರ್ ಬಿಐ ಅಧಿಕಾರಿಗಳ ಸೋಗಿನಲ್ಲಿ ಸಿಎಂಎಸ್ ವಾಹನ ತಡೆಗಟ್ಟಿದ 7ರಿಂದ 8 ಮಂದಿಯ ಗ್ಯಾಂಗ್ ವಾಹನದಲ್ಲಿದ್ದ 7.11 ಕೋಟಿ ರೂ. ನಗದು ಹಣವನ್ನು ತಮ್ಮ ವಾಹನಕ್ಕೆ ತುಂಬಿಕೊಂಡು ಪರಾರಿಯಾಗಿದ್ದಾರೆ.
ಮಂಗಳವಾರ ಮಧ್ಯಾಹ್ನ ನಡೆದ ಈ ಘಟನೆಯ ಮಾಹಿತಿ ಪಡೆದ ಪೊಲೀಸರು ಸಿಎಂಎಸ್ ವಾಹನದ ಚಾಲಕನ ಮೇಲೆ ಅನುಮಾನ ವ್ಯಕ್ತಪಡಿಸಿದ್ದು, ಚಾಲಕ ಸೇರಿ ವಾಹನದಲ್ಲಿದ್ದ ಸಿಬ್ಬಂದಿಯಿಂದ ಮಾಹಿತಿ ಸಂಗ್ರಹಿಸುತ್ತಿದ್ದಾರೆ.
ಚಾಲಕ ನೀಡಿದ ಮಾಹಿತಿ ಆಧರಿಸಿ 6 ಶಂಕಿತರ ಭಾವಚಿತ್ರವನ್ನು ಪೊಲೀಸರು ಬಿಡುಗಡೆ ಮಾಡಿದ್ದಾರೆ. ಪೊಲೀಸ್ ಆಯುಕ್ತರು ಪ್ರಕರಣದ ತನಿಖೆಗಾಗಿ ವಿಶೇಷ ತಂಡವನ್ನು ರಚಿಸಿದ್ದಾರೆ. ನಾಕಾ ಬಂದಿಯಲ್ಲಿರುವ ಸಿಬ್ಬಂದಿಗೆ ಈ ಫೋಟೊಗಳನ್ನು ರವಾನಿಸಿದ್ದು, ಪರಿಶೀಲನೆ ಮಾಡುವಂತೆ ಹಿರಿಯ ಪೊಲೀಸ್ ಅಧಿಕಾರಿಗಳು ಸೂಚನೆ ನೀಡಿದ್ದಾರೆ.


