ಐದು ವಿದ್ಯಾರ್ಥಿಗಳಿಗೆ ರ್ಯಾಗಿಂಗ್ ಮಾಡಿ ಕಿರುಕುಳ ನೀಡಿದ್ದ ಕೇರಳದ ತಿರುವನಂತಪುರಂ ಸರ್ಕರಿ ನರ್ಸಿಂಗ್ ಕಾಲೇಜಿನ 7 ವಿದ್ಯಾರ್ಥಿಗಳನ್ನು ಕಾಲೇಜಿನಿಂದ ಅಮಾನತು ಮಾಡಲಾಗಿದೆ.
ವಿದ್ಯಾರ್ಥಿಗಳು ಕಾಲೇಜಿನ ಪ್ರಾಂಶುಪಾಲರಿಗೆ ದೂರು ನೀಡಿದ ಹಿನ್ನೆಲೆಯಲ್ಲಿ ಕಾಲೇಜಿನ 7 ಹಿರಿಯ ವಿದ್ಯಾರ್ಥಿಗಳನ್ನು ಅಮಾನತು ಮಾಡಲಾಗಿದೆ.
ಕಾಲೇಜು ವಿದ್ಯಾರ್ಥಿಗಳಿಗೆ ರ್ಯಾಗಿಂಗ್ ನೆಪದಲ್ಲಿ ಚಿತ್ರ ಹಿಂಸೆ ನೀಡಿದ ಘಟನೆ ದೇಶಾದ್ಯಂತ ಭಾರೀ ಸುದ್ದಿಯಾಗಿತ್ತು. ಮರ್ಮಾಂಗಕ್ಕೆ ಡಂಬಲ್ಸ್ ಕಟ್ಟಿ ಹಿಂಸೆ ನೀಡಿದ್ದೂ ಅಲ್ಲದೇ ಮಂಡಿಯೂರಿ ಕೂರಿಸಿ ಹಲ್ಲೆ ಮಾಡಿದ್ದಾರೆ. ಕಣ್ಣಿಗೆ ಲೋಷನ್ ಹಾಕಿ ಜಾಮಿಟ್ರಿ ಬಾಕ್ಸ್ ಕಂಪಸ್ ನಿಂದ ಚುಚ್ಚಿ ಗಾಯಗೊಳಿಸಿದ್ದರು.
ಕಾಲೇಜಿನ ರ್ಯಾಗಿಂಗ್ ನಿಯಂತ್ರಣ ಸಮಿತಿ ದೂರಿನ ಹಿನ್ನೆಲೆಯಲ್ಲಿ ತನಿಖೆ ಮಾಡಿ ಇದು ರ್ಯಾಗಿಂಗ್ ಪ್ರಕರಣ ಎಂದು ದೃಢಪಡಿಸಿತ್ತು.
ತನಿಖಾ ವರದಿ ಹಿನ್ನೆಲೆಯಲ್ಲಿ 7 ವಿದ್ಯಾರ್ಥಿಗಳನ್ನು ಕಾಲೇಜಿನಿಂದ ಅಮಾನತು ಮಾಡಲಾಗಿದೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, 3ನೇ ವರ್ಷದ 6 ವಿದ್ಯಾರ್ಥಿಗಳು ಹಾಗೂ ಒಬ್ಬ ಎರಡನೇ ವರ್ಷದ ವಿದ್ಯಾರ್ಥಿಯನ್ನು ವಶಕ್ಕೆ ಪಡೆದಿದ್ದಾರೆ.