ನಾಸಿಕ್‌ನಲ್ಲಿ ನಡೆದ ರಸ್ತೆ ಅಪಘಾತದಲ್ಲಿ ಮೂವರು ಮಹಿಳೆಯರು, ಮೂವರು ಪುರುಷರು ಹಾಗೂ ಎರಡು ವರ್ಷದ ಮಗು ಸೇರಿದಂತೆ 7 ಜನ ಪ್ರಾಣ ಕಳೆದುಕೊಂಡಿದ್ದಾರೆ. ಕಾರು ಹಾಗೂ ಬೈಕ್ ಡಿಕ್ಕಿ ಹೊಡೆದ ಬಳಿಕ ಕಾರು ರಸ್ತೆ ಪಕ್ಕದಲ್ಲಿದ್ದ ಸಣ್ಣ ಕಾಲುವೆಗೆ ಪಲ್ಟಿಯಾಗಿ ಏಳು ಮಂದಿ ಮೃತಪಟ್ಟಿದ್ದಾರೆ. ಬೈಕ್‌ನಲ್ಲಿದ್ದ ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಕಾರಿನಲ್ಲಿದ್ದವರು ನಾಸಿಕ್ ನಗರದಲ್ಲಿ ಸಂಬಂಧಿಕರೊಬ್ಬರ ಮಗನ ಹುಟ್ಟುಹಬ್ಬದ ಆಚರಣೆಯಲ್ಲಿ ಭಾಗಿಯಾಗಿ ವಾಪಸ್ ಆಗುತ್ತಿದ್ದಾಗ ಈ ದುರಂತ ಸಂಭವಿಸಿದೆ. ಕಾಲುವೆಗೆ ಕಾರು ಬೀಳುತ್ತಿದ್ದಂತೆ ಕಾರಿನೊಳಗೆ ನೀರು ತುಂಬಿದೆ. ಇದರಿಂದ ಒಳಗೆ ಸಿಲುಕಿಕೊಂಡ ಪ್ರಯಾಣಿಕರು ತಪ್ಪಿಸಿಕೊಳ್ಳಲು ಸಾಧ್ಯವಾಗದೇ ಅಸು ನೀಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.