Wednesday, September 03, 2025
Menu

ಅಕ್ಟೋಬರ್ ನಲ್ಲಿ 800 ಕೆಪಿಎಸ್ ಶಾಲೆ ಆರಂಭ: ಸಚಿವ ಮಧು ಬಂಗಾರಪ್ಪ

ಶಿವಮೊಗ್ಗ: ಅಕ್ಟೋಬರ್​​ನಲ್ಲಿ 800 ಕರ್ನಾಟಕ ಪಬ್ಲಿಕ್ ಶಾಲೆಗಳನ್ನು ತೆರೆಯಲಾಗುವುದು. ಈ ಯೋಜನೆಗೆ ಸಿಎಂ ಸಿದ್ದರಾಮಯ್ಯನವರು ಶಿವಮೊಗ್ಗದಲ್ಲಿಯೇ ಚಾಲನೆ ನೀಡಲಿದ್ದಾರೆ ಎಂದು ಸಾಕ್ಷರತಾ ಹಾಗೂ ಶಾಲಾ ಶಿಕ್ಷಣ ಸಚಿವ ಎಸ್.ಮಧು ಬಂಗಾರಪ್ಪ ಹೇಳಿದ್ದಾರೆ.

ಮಂಗಳವಾರ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ 800 ಕೆಪಿಎಸ್ ಶಾಲೆಗಳನ್ನು ತೆರೆಯಲಾಗುವುದು. ಇದರಲ್ಲಿ 500 ಶಾಲೆಗಳನ್ನು ವಿಶ್ವ ಬ್ಯಾಂಕ್​​ ನೆರವಿನಿಂದ ಪ್ರಾರಂಭಿಸಲಾಗುತ್ತಿದೆ. ಕೆಕೆಆರ್​​ಎಲ್​​ನಿಂದ 200 ಶಾಲೆಗಳು, ಉಳಿದ 100 ಶಾಲೆಗಳನ್ನು ಗಣಿ ಮತ್ತು ಭೂ ವಿಜ್ಞಾನ ಇಲಾಖೆಯಿಂದ ಪ್ರಾರಂಭಿಸಲಾಗುವುದು ಎಂದು ತಿಳಿಸಿದರು.

800 ಕೆಪಿಎಸ್ ಶಾಲೆಯಲ್ಲಿ ಉತ್ತರ ಕರ್ನಾಟಕಕ್ಕೆ‌ ವಿಶೇಷ ಆದ್ಯತೆ‌‌ ನೀಡಲಾಗುತ್ತಿದೆ. ಸರ್ಕಾರದ ಜೊತೆಗೆ ಎಸ್​​ಜಿಓಗಳು ಕೈ ಜೋಡಿಸಲಿವೆ. ಈ ಶಾಲೆಗಳನ್ನು ಮುಂಬರುವ ಅಕ್ಟೋಬರ್​​ನಲ್ಲಿ ಶಿವಮೊಗ್ಗದಿಂದಲೇ‌ ಪ್ರಾರಂಭಿಸಲು ಸಿಎಂ ಅವರನ್ನು ಕರೆಸಲಾಗುತ್ತದೆ. ಇದರ ಜೊತೆಗೆ ಜಿಲ್ಲೆಯ ಅಭಿವೃದ್ದಿ ಕಾಮಗಾರಿಗೂ ಚಾಲನೆ ನೀಡಲಾಗುತ್ತದೆ. ಶರಾವತಿ ಪಂಪ್ಡ್ ಸ್ಟೋರೇಜ್ ವಿಚಾರವನ್ನೂ ಸಿಎಂ ಮಾತನಾಡಲಿದ್ದಾರೆ ಎಂದರು.

Related Posts

Leave a Reply

Your email address will not be published. Required fields are marked *