ಸಹಕಾರಿ ಸಾಲ ವಿತರಣೆಯಲ್ಲಿ ಶೇಕಡ ಶೇ.90 ರಷ್ಟು ಪ್ರಗತಿ : ಎಸ್. ಟಿ. ಸೋಮಶೇಖರ್
ಬೆಂಗಳೂರು, ಮಾ 2 ಸಹಕಾರ ಸಂಘಗಳ ಮೂಲಕ 3 ಲಕ್ಷ ರೂ. ವರೆಗಿನ ಬೆಳೆ ಸಾಲವನ್ನು ಶೂನ್ಯ ಬಡ್ಡಿ ದರದಲ್ಲಿ ಮತ್ತು ರೂ.10 ಲಕ್ಷಗಳ ವರೆಗಿನ ಮಧ್ಯಮಾವಧಿ ಮತ್ತು ದೀರ್ಘಾವಧಿ ಕೃಷಿ ಸಾಲವನ್ನು ಶೇ.3 ರ ಬಡ್ಡಿ ದರದಲ್ಲಿ ವಿತರಿಸಲಾಗುತ್ತಿದೆ ಎಂದು ಸಹಕಾರ ಸಚಿವ ಎಸ್. ಟಿ ಸೋಮಶೇಖರ್ ಹೇಳಿದ್ದಾರೆ.
ವಿಧಾನ ಸೌಧದಲ್ಲಿ ಮಂಗಳವಾರ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಸಚಿವರು 2020-21ನೇ ಸಾಲಿನಲ್ಲಿ 24.50 ಲಕ್ಷ ರೈತರಿಗೆ ರೂ.14500 ಕೋಟಿ ಅಲ್ಪಾವಧಿ ಬೆಳ ಸಾಲ ಮತ್ತು .70 ಲಕ್ಷ ರೈತರಿಗೆ 1200 ಕೋಟಿ ಮಧ್ಯಮಾವಧಿ, ದೀರ್ಘಾವಧಿ ಸಾಲ ವಿತರಣೆ ಗುರಿ ಹೊಂದಲಾಗಿದೆ ಎಂದರು.
25-02-2021 ರವರೆಗೆ ಒಟ್ಟು 21.64 ಲಕ್ಷ ರೈತರಿಗೆ ರೂ.14179.22 ಕೋಟಿಗಳ ಅಲ್ಪಾವಧಿ ಕೃಷಿ ಸಾಲ ಮತ್ತು 0.36 ಲಕ್ಷ ರೈತರಿಗೆ ರೂ.800.51 ಕೋಟಿಗಳ ಮಧ್ಯಮಾವಧಿ- ದೀರ್ಘಾವಧಿ ಸಾಲ ವಿತರಿಸಿ ಶೇ.90.56 ರಷ್ಟು ಪ್ರಗತಿ ಸಾಧಿಸಲಾಗಿದೆ.
ಪಶುಸಂಗೋಪನೆಗೆ ದುಡಿಯುವ ಬಂಡವಾಳ ಮತ್ತು ಮೀನುಗಾರರಿಗೆ ದುಡಿಯುವ ಬಂಡವಾಳಕ್ಕಾಗಿ ಸಾಲ ವಿತರಣೆ ಮಾಡಲಾಗಿದೆ..ಈ ಯೋಜನೆಯಡಿ ಹಾಲು ಉತ್ಪಾದಕ ಸಹಕಾರ ಸಂಘಗಳು ಹಾಲು ಪೂರೈಕೆ ಮಾಡುತ್ತಿರುವ ರೈತರಿಂದ ಸಾಲದ ಅರ್ಜಿಗಳನ್ನು ಪಡೆದು ಸಂಬಂಧಿಸಿದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ಅಥವಾ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ಸಲ್ಲಿಸಿ ಗರಿಷ್ಠ 2 ಲಕ್ಷರೂ ಗಳ ವರೆಗಿನ ಸಾಲವನ್ನು ಶೂನ್ಯ ಬಡ್ಡಿದರದಲ್ಲಿ ಪಡೆಯಬಹುದಾಗಿದೆ.
ಮೀನುಗಾರಿಕೆ ಸಹಕಾರ ಸಂಘಗಳೂ ಸಹ ಸಾಲ ಪಡೆಯಬಹುದಾಗಿದೆ.2020-21 ನೇ ಸಾಲಿನಲ್ಲಿ 38825 ರೈತರಿಗೆ ರೂ.100,00 ಕೋಟಿಗಳ ಸಾಲ ವಿತರಿಸಲು ಗುರಿ ನಿಗದಿಪಡಿಸಲಾಗಿದೆ.
ಪ್ರದೇಶದ ಮಹಿಳೆಯರು ಆರ್ಥಿಕವಾಗಿ ಸ್ವಾವಲಂಬಿಗಳಾಗಲು ರಾಜ್ಯದಲ್ಲಿ ಇಲ್ಲಿಯವರೆಗೆ ಸಹಕಾರ ಕ್ಷೇತ್ರದಲ್ಲಿ 2.5 ಲಕ್ಷ ಸ್ತ್ರೀಶಕ್ತಿ/ಸ್ವಸಹಾಯ ಗುಂಪುಗಳನ್ನು ರಚನೆ ಮಾಡಲಾಗಿದ್ದು,ಡಿಸಿಸಿ ಬ್ಯಾಂಕು/ಪ್ಯಾಕ್ಸ್ಗಳ ಮೂಲಕ ಮಹಿಳಾ ಗುಂಪುಗಳಿಗೆ ರೂ.5 ಲಕ್ಷದವರೆಗೆ ಶೂನ್ಯ ಬಡ್ಡಿದರದಲ್ಲಿ ಪುರುಷ ಗುಂಪುಗಳಿಗೆ ಶೇಕಡಾ 4ರ ಬಡ್ಡಿದರದಲ್ಲಿ ಸಾಲ ವಿತರಿಸಲಾಗುತ್ತಿದೆ ಎಂದೂ ಸಚಿವರು ಹೇಳಿದರು.