9,300 ಕೋಟಿ. ರೂ. ಸಾಲ ನೀಡಿಕೆ – ಮುಖ್ಯಮಂತ್ರಿ ಯಡಿಯೂರಪ್ಪ

ಬೆಂಗಳೂರು : ಕೋವಿಡ್‌ನಿಂದ ಸಂಕಷ್ಟದಲ್ಲಿ ಸಿಲುಕಿರುವ ಜನತೆಗೆ ನೆರವಾಗಲು ರಾಜ್ಯ ಸರ್ಕಾರ ಈ ವರ್ಷ ಸಹಕಾರ ಸಂಸ್ಥೆಗಳ ಮೂಲಕ ಕೃಷಿ ಮತ್ತು ಕೃಷಿಯೇತರ ವಲಯಕ್ಕೆ ಒಟ್ಟು 39,300 ಕೋಟಿ ರೂ.ಗಳ ಸಾಲ ನೀಡಲಾಗುವುದು ಎಂದು ಮುಖ್ಯಮಂತ್ರಿ ಯಡಿಯೂರಪ್ಪ ತಿಳಿಸಿದ್ದಾರೆ.
ಈ ವರ್ಷ ರಾಜ್ಯದ ಸಹಕಾರ ಸಂಸ್ಥೆಗಳು ಕೃಷಿ ಕ್ಷೇತ್ರಕ್ಕೆ 15,300 ಕೋಟಿ ರೂ. ಮತ್ತು ಕೃಷಿಯೇತರ ವಲಯಕ್ಕೆ 24 ಸಾವಿರ ಕೋಟಿ ರೂ.ಗಳನ್ನು ಸಾಲವಾಗಿ ವಿತರಿಸಲಿವೆ. ಇದಕ್ಕಾಗಿ ಸಾಲ ವಿತರಿಸುವ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.
ವಿಧಾನಸೌಧದ ಬ್ಯಾಕ್ವೆಂಟ್ ಹಾಲ್‌ನಲ್ಲಿ ಸಹಕಾರ ಇಲಾಖೆ ಆಯೋಜಿಸಿದ್ದ ಆರ್ಥಿಕ ಸ್ಪಂದನಾ ಕಾರ್ಯಕ್ರಮದಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರದ ವಿವಿಧ ಯೋಜನೆಗಳ ಫಲಾನುಭವಿಗಳಿಗೆ ಸಾಲ ವಿತರಿಸಿ ಮಾತನಾಡಿದ ಅವರು, ಲಾಕ್‌ಡೌನ್‌ನಿಂದ ಸಂಕಷ್ಟದಲ್ಲಿದ್ದವರಿಗೆ ರಾಜ್ಯ ಸರ್ಕಾರ ಮೂರು ಹಂತಗಳಲ್ಲಿ ಆರ್ಥಿಕ ಪ್ಯಾಕೇಜ್ ಘೋಷಿಸಿ ಸುಮಾರು 2 ಸಾವಿರ ಕೋಟಿ ರೂ.ಗಳಿಗೂ ಹೆಚ್ಚು ನೆರವನ್ನು ಸರ್ಕಾರ ಒದಗಿಸಿದೆ ಎಂದು ತಿಳಿಸಿದ್ದಾರೆ.

,

Leave a Reply

Your email address will not be published. Required fields are marked *