Menu

ಕಾನೂನಿಗಿಂತ ದೊಡ್ಡವರು ಯಾರಿಲ್ಲ: ಸಿಎಂ ಸಿದ್ದರಾಮಯ್ಯ

bk cm

ಕೋಮು ಗಲಭೆಗಳನ್ನು ಉಂಟು ಮಾಡುವವರು ಎಷ್ಟೇ ಪ್ರಭಾವಿಗಳಾಗಿದ್ದರೂ ಕೂಡ ಕಾನೂನಿನ ರೀತಿ ಕಠಿಣ ಕ್ರಮ ಕೈಗೊಳ್ಳಲಾಗುವುದು.ಯಾರೂ ಕಾನೂನಿಗಿಂತ ದೊಡ್ಡವರಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ವಿಧಾನ ಪರಿಷತ್ ಸದಸ್ಯ ಬಿ.ಕೆ.ಹರಿಪ್ರಸಾದ್ ಅವರೊಂದಿಗೆ ಬೆಳಗಿನ ಉಪಾಹಾರ ಮಾಡಿದ್ದು, ಸಾಮಾನ್ಯ ವಿಷಯಗಳ ಚರ್ಚೆ ಜೊತೆಗೆ ಮಂಗಳೂರಿನಲ್ಲಿ ಸೌಹಾರ್ದತೆ ನೆಲೆಸಬೇಕು, ದ್ವೇಷ ಯಾವುದೇ ಕಾರಣಕ್ಕೂ ಇರಬಾರದು ಎಂಬ ಬಗ್ಗೆಯೂ ಚರ್ಚಿಸಲಾಗಿದೆ ಎಂದು ಮುಖ್ಯಮಂತ್ರಿ ತಿಳಿಸಿದರು.

ಮಾಧ್ಯಮದವರೊಂದಿಗೆ ಮಾತನಾಡಿದ ಸಿಎಂ, ನಾಳೆ ಮತ್ತು ನಾಡಿದ್ದು ಎರಡು ದಿನ ನಡೆಯಲಿರುವ ಡಿಸಿ.ಹಾಗೂ ಸಿಇಒಗಳ ಸಭೆಯಲ್ಲಿ ಮುಂಗಾರು ಮಳೆ ಪರಿಸ್ಥಿತಿಗಳ ಬಗ್ಗೆ ಕೈಗೊಳ್ಳಲಾಗಿರುವ ಮುನ್ನೆಚ್ಚರಿಕಾ ಕ್ರಮಗಳ ಕುರಿತು ಚರ್ಚಿಸಲಾಗುವುದು ಎಂದು ಹೇಳಿದರು.

Related Posts

Leave a Reply

Your email address will not be published. Required fields are marked *