ಬ್ಯಾಟರಾಯನಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮೈಸೂರು ರಸ್ತೆಯ ಬಾಪೂಜಿನಗರದಲ್ಲಿಕಾರು ಚಾಲಕರೊಬ್ಬರನ್ನು ಬಿಯರ್ ಬಾಟಲ್, ಕಲ್ಲುಗಳಿಂದ ಹೊಡೆದು ಕೊಲೆ ಮಾಡಿರುವುದು ಪತ್ತೆಯಾಗಿದೆ.
ಕೌಶಿಕ್ (25 ) ಕೊಲೆಯಾದವರು, ಅಪರಿಚಿತರು ಕೊಲೆ ಮಾಡಿರಬುದೆಂಬ ಶಂಕೆ ವ್ಯಕ್ತವಾಗಿದೆ. ಸ್ಥಳಕ್ಕೆ ಬ್ಯಾಟರಾಯನಪುರ ಪೊಲೀಸರು ಭೇಟಿ ಪರಿಶೀಲನೆ ನಡೆಸಿದ್ದಾರೆ.
ಮೃತ ದೇಹವನ್ನು ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಇರಿಸಲಾಗಿದೆ. ಕೊಲೆಯ ಬಗ್ಗೆ ಪೋಲಿಸರು ಪ್ರಕರಣ ದಾಖಲಿಸಿದ್ದು, ತನಿಖೆ ಮುಂದುವರಿಸಿದ್ದಾರೆ.
ಕುಂದಾಪುರದಲ್ಲಿ ಬೆಂಗಳೂರಿನ ಮೂವರು ಸಮುದ್ರಪಾಲು
ಬೆಂಗಳೂರಿನಿಂದ ಕುಂದಾಪುರಕ್ಕೆ ಪ್ರವಾಸಕ್ಕೆ ಹೋಗಿದ್ದ ಮೂವರು ಯುವಕರು ಸಮುದ್ರದಲ್ಲಿ ಕೊಚ್ಚಿಕೊಂಡು ಹೋಗಿದ್ದಾರೆ. ಕುಂದಾಪುರ ತಾಲೂಕಿನ ಗೋಪಾಡಿ ಚರ್ಕಿಕಡು ಎಂಬಲ್ಲಿ ಈ ದುರಂತ ನಡೆದಿದೆ.
ಬೆಂಗಳೂರಿನಿಂದ ಹತ್ತು ಯುವಕರು ಕುಂದಾಪುರಕ್ಕೆ ಹೋಗಿದ್ದರು. ಏಳು ಯುವಕರು ಸಮುದ್ರದ ತೀರದಲ್ಲಿ ಆಟವಾಡುತ್ತಾ ನೀರಿಗೆ ಇಳಿದಿದ್ದರು. ಅಲೆಗಳಲ್ಲಿ ನಾಲ್ವರು ಕೊಚ್ಚಿಕೊಂಡು ಹೋಗಿದ್ದು, ಒಬ್ಬನನ್ನು ರಕ್ಷಿಸಲಾಗಿದೆ.
ಇಬ್ಬರು ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದು, ಒಬ್ಬ ಓರ್ವ ನಾಪತ್ತೆಯಾಗಿದ್ದಾನೆ. ಆತನಿಗಾಗಿ ಶೋಧ ಕಾರ್ಯ ನಡೆಯುತ್ತಿದೆ.