Menu

ವೇದಿಕೆಯಲ್ಲಿದ್ದ ಟ್ರಂಪ್‌ ಅತ್ಯಾಪ್ತನಿಗೆ ಗುಂಡಿಟ್ಟು ಹತ್ಯೆ

ಅಮೆರಿಕದ ಉಟಾವಾ ವ್ಯಾಲಿ ವಿಶ್ವವಿದ್ಯಾಲಯದ ಕ್ಯಾಂಪಸ್‌ನಲ್ಲಿ ವೇದಿಕೆಯಲ್ಲಿ ಭಾಷಣ ಮಾಡುತ್ತಿದ್ದ ಅಧ್ಯಕ್ಷ ಟ್ರಂಪ್‌ ಅವರ ಅತ್ಯಾಪ್ತ ಚಾರ್ಲಿ ಕಿರ್ಕ್‌ನನ್ನು ದುಷ್ಕರ್ಮಿಗಳು ಗುಂಡಿಟ್ಟು ಕೊಂದಿದ್ದಾರೆ.

ಗುಂಡಿನ ದಾಳಿಯ ನಂತರ ವಿವಿ ಕ್ಯಾಂಪಸ್‌ ಅನ್ನು ಸೀಲ್ ಮಾಡಿದ ಪೊಲೀಸರು ಆರೋಪಿಗಾಗಿ ಹುಡುಕಾಟ ನಡೆಸಿದ್ದಾರೆ. ಟರ್ನಿಂಗ್ ಪಾಯಿಂಟ್ ಯುಎಸ್‌ಎ ಎಂಬ ಸಂಸ್ಥೆಯ ಸಿಇಒ ಕೂಡ ಆಗಿರುವ 31 ವರ್ಷದ ಚಾರ್ಲಿ ಕಿರ್ಕ್ ಯುವ ರಿಪಬ್ಲಿಕನ್ ಮತದಾರರನ್ನು ಸೆಳೆಯುವಲ್ಲಿ ಪ್ರಮುಖ ಪಾತ್ರವನ್ನು ವಹಿಸಿದ್ದವರು.

“ದಿ ಅಮೆರಿಕನ್ ಕಾಮ್‌ಬ್ಯಾಕ್’ ಪ್ರೂವ್ ಮೀ ರಾಂಗ್” ಎಂಬ ಘೋಷಣೆಗಳನ್ನು ಕೂಗುತ್ತಿರುವ ಸಮಾರಂಭದಲ್ಲಿ ಭಾಗವಹಿಸಿದ್ದಾಗ ಈ ದುರಂತ ಸಂಭವಿಸಿದೆ. ಗುಂಡು ಹಾರಿದಾಗ ಕಿರ್ಕ್ ತಮ್ಮ ಕತ್ತನ್ನು ಗಟ್ಟಿಯಾಗಿ ಹಿಡಿದುಕೊಂಡಿದ್ದು, ರಕ್ತ ಸುರಿಯುತ್ತಿದ್ದ ದೃಶ್ಯಗಳು ಕ್ಯಾಮರಾದಲ್ಲಿ ಸೆರೆ ಆಗಿವೆ. ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಈ ರಾಜಕೀಯ ಹತ್ಯೆಯನ್ನು ತೀವ್ರವಾಗಿ ಖಂಡಿಸಿದ್ದಾರೆ.

ಅಮೆರಿಕದಲ್ಲಿ ಯುವಕರ ಹೃದಯವನ್ನು ಚಾರ್ಲಿಗಿಂತ ಚೆನ್ನಾಗಿ ಯಾರೂ ಅರ್ಥಮಾಡಿಕೊಂಡಿಲ್ಲ ಅವರನ್ನು ಎಲ್ಲರೂ ವಿಶೇಷವಾಗಿ ನಾನು ಪ್ರೀತಿಸುತ್ತಿದ್ದೆ ಮತ್ತು ಮೆಚ್ಚುತ್ತಿದ್ದೆ. ಅಮೆರಿಕನ್‌ ಮೌಲ್ಯಗಳಿಗಾಗಿ ಪ್ರಾಣವನ್ನೇ ತ್ಯಾಗ ಮಾಡಿದ್ದಾರೆ. ಆ ಮೌಲ್ಯಗಳಿಗೆ ಬದ್ಧರಾಗಬೇಕೆಂದು ನಾನು ಅಮೆರಿಕನ್ನರಲ್ಲಿ ಮನವಿ ಮಾಡುತ್ತೇನೆ ಎಂದು ಟ್ರಂಪ್‌ ಹೇಳಿದ್ದಾರೆ.

ಎಫ್‌ಬಿಐ ನಿರ್ದೇಶಕ ಕಾಶ್‌ ಪಟೇಲ್‌, “ಚಾರ್ಲಿ ಕಿರ್ಕ್‌ ಹತ್ಯೆಗೆ ಸಂಬಂಧಿಸಿದಂತೆ ಕಾನೂನು ಜಾರಿ ಅಧಿಕಾರಿಗಳು, ಘಟನಾ ಸ್ಥಳದಲ್ಲಿ ಶಂಕಿತನನ್ನು ಬಂಧಿಸಿ ವಿಚಾರಣೆ ನಡೆಸಿದ್ದಾರೆ. ಆತ ಹತ್ಯೆಯಲ್ಲಿ ಭಾಗಿಯಾಗಿಲ್ಲ ಎಂಬುದನ್ನು ಖಚಿತಪಡಿಸಿಕೊಂಡ ಬಳಿಕ ಬಿಡುಗಡೆ ಮಾಡಲಾಗಿದೆ. ಕೊಲೆಗಾರನ ಬಂಧನಕ್ಕೆ ಶೋಧಕಾರ್ಯ ನಡೆಯುತ್ತಿದೆ ಎಂದು ತಿಳಿಸಿದ್ದಾರೆ.

Related Posts

Leave a Reply

Your email address will not be published. Required fields are marked *