Menu

NEET-PG 2025 Exam : ನೀಟ್‌-ಪಿಜಿ 2025 ಪರೀಕ್ಷೆ ಮುಂದೂಡಿಕೆ

ರಾಷ್ಟ್ರೀಯ ಅರ್ಹತಾ-ಪ್ರವೇಶ ಪರೀಕ್ಷೆ (ನೀಟ್‌) ಪಿಜಿ 2025 ಅನ್ನು ಒಂದೇ ಪಾಳಿಯಲ್ಲಿ ಪರೀಕ್ಷೆ ನಡೆಸುವಂತೆ ರಾಷ್ಟ್ರೀಯ ಪರೀಕ್ಷಾ ಮಂಡಳಿಗೆ ಸುಪ್ರೀಂ ಕೋರ್ಟ್‌ ನಿರ್ದೇಶಿಸಿದ ಹಿನ್ನೆಲೆಯಲ್ಲಿ ಪರೀಕ್ಷೆಯನ್ನು ಮುಂದೂಡಲಾಗಿದೆ. ಜೂನ್ 15 ರಂದು ನಡೆಯಬೇಕಿದ್ದ ಪರೀಕ್ಷೆಯನ್ನು ಮುಂದೂಡಲಾಗಿದ್ದು, ಪರಿಷ್ಕೃತ ದಿನಾಂಕವನ್ನು ಶೀಘ್ರದಲ್ಲೇ ತಿಳಿಸಲಾಗುವುದು ಎಂದು ಮಂಡಳಿ ಹೇಳಿದೆ.

ಹೆಚ್ಚಿನ ಪರೀಕ್ಷಾ ಕೇಂದ್ರಗಳು ಮತ್ತು ಅಗತ್ಯವಿರುವ ಮೂಲಸೌಕರ್ಯಗಳನ್ನು ವ್ಯವಸ್ಥೆ ಮಾಡಿ ಪರೀಕ್ಷೆಗಳನ್ನು ಸುಗಮವಾಗಿ ನಡೆಸಲು ಅಗತ್ಯ ಕ್ರಮ ಕೈಗೊಳ್ಳುವುದಾಗಿ ಮಂಡಳಿ ತಿಳಿಸಿದೆ. ಜೂ.15ರಂದು 2 ಪಾಳಿಯಲ್ಲಿ ಪರೀಕ್ಷೆ ನಡೆಸುವ ಮಂಡಳಿಯ ನಿರ್ಧಾರವನ್ನು ಸುಪ್ರೀಂ ಕೋರ್ಟ್‌ ಇತ್ತೀಚೆಗೆ ತಿರಸ್ಕರಿಸಿರುವ ಕಾರಣ ಎರಡು ಪಾಳಿಗಳಲ್ಲಿ ನಡೆಸಲು ಪರೀಕ್ಷೆ ದಿನಾಂಕವನ್ನು ಮುಂದೂಡಲಾಗಿದೆ.

ದೇಶದ ಪ್ರತಿಷ್ಠಿತ ಎಂಜಿನಿಯರ್‌ ಕಾಲೇಜುಗಳ ಪ್ರವೇಶಕ್ಕಾಗಿ ನಡೆದ ಜೆಇಇ ಅಡ್ವಾನ್ಸ್ಡ್‌ ಪರೀಕ್ಷಾ ಫಲಿತಾಂಶ ಈಗಾಗಲೇ ಪ್ರಕಟವಾಗಿದ್ದು, ದೆಹಲಿ ವಲಯದ ರಜಿತ್‌ ಗುಪ್ತಾ ದೇಶಕ್ಕೆ ಪ್ರಥಮ ಸ್ಥಾನ ಪಡೆದಿದ್ದಾರೆ.

ಜೆಇಇ ಮೇನ್ಸ್‌ ಪಾಸಾದವರಿಗೆ ಜೆಇಇ ಅಡ್ವಾನ್ಸ್ಡ್‌ ಪರೀಕ್ಷೆ ಮೇ 18 ರಂದು ನಡೆದಿದ್ದು, 1, 80,422 ವಿದ್ಯಾರ್ಥಿಗಳು ಬರೆದಿದ್ದರು. 9404 ವಿದ್ಯಾರ್ಥಿನಿಯರು ಸೇರಿ ಒಟ್ಟು 54,378 ಮಂದಿ ಪರೀಕ್ಷೆಗೆ ಅರ್ಹತೆ ಪಡೆದಿದ್ದಾರೆ.

Related Posts

Leave a Reply

Your email address will not be published. Required fields are marked *