ಐಪಿಎಲ್ ಫೈನಲ್‌ನಲ್ಲಿ ಜಯ ಗಳಿಸಿ ಆರ್‌ಸಿಬಿ ಕಪ್ ತನ್ನದಾಗಿಸಿಕೊಂಡ ಗೆಲುವಿನ ಸಂಭ್ರಮಾಚರಣೆಯಲ್ಲಿದ್ದ ಆರ್‌ಸಿಬಿ ಅಭಿಮಾನಿಗೆ ದುಷ್ಕರ್ಮಿಗಳು ಚಾಕು ಇರಿದ ಘಟನೆ ಜಾಲಹಳ್ಳಿ ಕ್ರಾಸ್ ಬಳಿ ಮಂಗಳವಾರ ತಡರಾತ್ರಿ ನಡೆದಿದೆ.
ಆರ್‌ಸಿಬಿಗೆದ್ದು ಬೀಗಿದ ಕಾರಣಕ್ಕೆ ಯುವಕ ಸಂಭ್ರಮಾಚರಣೆ ಮಾಡುತ್ತಾ ಬಾರ್‌ಗೆ ತೆರಳುವ ವೇಳೆ ದುಷ್ಕರ್ಮಿಗಳು ಚಾಕುವಿನಿಂದ ಆತನ ಕುತ್ತಿಗೆಗೆ ಇರಿದು ಪರಾರಿಯಾಗಿದ್ದಾರೆ. ಯುವಕ ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ತಪ್ಪಿಸಿಕೊಂಡಿದ್ದಾನೆ. ಸ್ಥಳೀಯರ ಸಹಾಯದಿಂದ ಯುವಕನನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಪೀಣ್ಯಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಸತತ ೧೮ ವರ್ಷಗಳ ಸೋಲಿನ ಬಳಿಕ ಐಪಿಎಲ್‌ನಲ್ಲಿ ಆರ್‌ಸಿಬಿ ತಂಡವು ವಿರಾಟ್ ಕೊಹ್ಲಿ ನಾಯಕತ್ವದಲ್ಲಿ ಕಪ್ ಗೆದ್ದುಕೊಳ್ಳುವ ಮೂಲಕ ಬೆಂಗಳೂರು ಸೇರಿದಂತೆ ಕರ್ನಾಟಕದ ಎಲ್ಲೆಡೆಯೂ ಅಭಿಮಾನಿಗಳ ಸಂಭ್ರಮಾಚರಣೆ ಮುಗಿಲು ಮುಟ್ಟಿತ್ತು.