ಬಂಗಾಳಕೊಲ್ಲಿಯಲ್ಲಿ ವಾಯಭಾರ ಕುಸಿತದ ಪರಿಣಾಮ ಸೆಪ್ಟೆಂಬರ್ 18ರವರೆಗೆ ರಾಜ್ಯದ ಹಲವೆಡೆ ಭಾರೀ ಮಳೆಯಾಗಲಿದೆ ಎಂದು ರಾಜ್ಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಬಂಗಾಳ ಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತ ಹಾಗೂ ಮೇಲ್ಮೈ ಸುಳಿಗಾಳಿಯ ಪ್ರಭಾವದಿಂದ ರಾಜ್ಯದ ದಕ್ಷಿಣ ಒಳನಾಡು ಹಾಗೂ ಕಲ್ಯಾಣ ಕರ್ನಾಟಕ ಭಾಗದ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ.
ದ್ದು, ಹವಾಮಾನ ಇಲಾಖೆ ಮುನ್ಸೂಚನೆ ಪ್ರಕಾರ ಸೆಪ್ಟಂಬರ್ 18ರ ವರೆಗೂ ರಾಜ್ಯದಲ್ಲಿ ಮಳೆ ಪ್ರಮಾಣ ಹೆಚ್ಚಾಗಲಿದೆ. ಸೆ.14ರ ವರೆಗೆ ಉತ್ತರ ಕರ್ನಾಟಕ ಮತ್ತು ಕಲ್ಯಾಣ ಕರ್ನಾಟಕ ಜಿಲ್ಲೆಗಳ ಕೆಲವೆಡೆ ಭಾರಿ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.
ರಾಜಧಾನಿ ಬೆಂಗಳೂರು ಸುತ್ತಮುತ್ತಲ ಜಿಲ್ಲೆಗಳಲ್ಲಿ ಭಾಗಶಃ ಮೋಡ ಕವಿದ ವಾತಾವರಣವಿರಲಿದ್ದು, ಸಂಜೆ ಹಾಗೂ ರಾತ್ರಿ ವೇಳೆ ಕೆಲವೆಡೆ ಹಗುರದಿಂದ ಸಾಧಾರಣ ಮಳೆಯಾಗುವ ಮುನ್ಸೂಚನೆಗಳಿವೆ.
ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 26 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 20 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ ಎಂದು ತಿಳಿಸಿದೆ.
ಕರಾವಳಿ, ಮಲೆನಾಡು ಹಾಗೂ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಚದುರಿದಂತೆ ಸಾಧಾರಣ ಮಳೆಯಾಗಲಿದೆ. ಕರಾವಳಿ ಹಾಗೂ ಕರಾವಳಿಗೆ ಹೊಂದಿಕೊಂಡಿರುವ ಜಿಲ್ಲೆಗಳಲ್ಲಿ ಇಂದಿನಿಂದ ಮೂರು ದಿನಗಳ ಕಾಲ ವ್ಯಾಪಕ ಮಳೆ ಸುರಿಯಲಿದೆ.
ಶುಕ್ರವಾರದವರೆಗೆ ದಕ್ಷಿಣ ಕನ್ನಡ, ಬೆಳಗಾವಿ, ಚಿಕ್ಕಬಳ್ಳಾಪುರ, ಕೋಲಾರ, ಬಾಗಲಕೋಟೆ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಮಂಡ್ಯ, ವಿಜಯನಗರ, ಹಾಸನ ಮತ್ತು ಚಿಕ್ಕಮಗಳೂರು ಜಿಲ್ಲೆಗಳ ಕೆಲವೆಡೆ ಮಾತ್ರ ಮಳೆ ಬಿದ್ದಿದೆ. ಉಳಿದಂತೆ ಒಣಹವೆ ಮುಂದುವರೆದಿದ್ದು, ಅತ್ಯಲ್ಪ ಪ್ರಮಾಣದ ಮಳೆಯಾಗಿದೆ.
ರಾಯಚೂರು, ಬಳ್ಳಾರಿ, ವಿಜಯಪುರ ಜಿಲ್ಲೆಗಳಲ್ಲಿ ಸಾಧಾರಣವಾಗಿ ವ್ಯಾಪಕ ಮಳೆ ಬಿದ್ದಿದೆ. ಕೊಪ್ಪಳ, ಕಲಬುರಗಿ, ಯಾದಗಿರಿ ಜಿಲ್ಲೆಗಳ ಅಲ್ಲಲ್ಲಿ ಮಳೆಯಾಗಿದೆ.