ಪ್ರಯಾಣಿಕರನ್ನು ತುಂಬಿಕೊಂಡು ಚಲಿಸುತ್ತಿದ್ದ ಬಿಎಂಟಿಸಿ ಬಸ್‌ನಲ್ಲಿ ಬೆಂಕಿ ಕಾಣಿಸಿಕೊಂಡು, ಬಸ್ ಸುಟ್ಟು ಕರಕಲಾಗಿ ಹೋಗಿರುವ ಘಟನೆ ಬೆಂಗಳೂರು ಹೆಚ್ಎಎಲ್ ಮುಖ್ಯದ್ವಾರದ ಬಳಿ ನಡೆದಿದೆ.
ಬಸ್ ಮೆಜೆಸ್ಟಿಕ್‌ನಿಂದ ಕಾಡುಗೋಡಿಗೆ ತೆರಳುತ್ತಿದ್ದಾಗ ಬೆಳಗ್ಗಿನ ಜಾವ 5:10ಕ್ಕೆ ಈ ಅಗ್ನಿ ದುರಂತ ಸಂಭವಿಸಿದೆ. ಬಸ್‌ನಲ್ಲಿ 75 ಪ್ರಯಾಣಿಕರಿದ್ದರು. ಬಸ್ ಚಲಿಸುತ್ತಿದ್ದಂತೆ ಎಂಜಿನ್‌ನಲ್ಲಿ ಹೊಗೆ ಕಾಣಿಸಿಕೊಂಡಿದೆ. ಇದರಿಂದ ಎಚ್ಚೆತ್ತ ಚಾಲಕ, ನಿರ್ವಾಹಕರು ತಕ್ಷಣ ಪ್ರಯಾಣಿಕರನ್ನ ಕೆಳಗಿಳಿಸಿದ್ದಾರೆ.
ಬಳಿಕ ಬೆಂಕಿ ವ್ಯಾಪಿಸಿ ಬಸ್ ಉರಿದು ಕರಕಲಾಗಿ ಹೋಗಿದೆ. ಚಾಲಕನ ಸಮಯ ಪ್ರಜ್ಞೆಯಿಂದ 75 ಪ್ರಯಾಣಿಕರು ಸೇಫ್ ಆಗಿದ್ದಾರೆ. ಬಳಿಕ ಹೆಚ್ಎಲ್ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ. ಬಸ್‌ನಲ್ಲಿ ಬೆಂಕಿ ಕಾಣಿಸಿಕೊಳ್ಳಲು ಕಾರಣ ಏನು ಎಂಬುದನ್ನು ಪತ್ತೆ ಹಚ್ಚಲು ಬಿಎಂಟಿಸಿ ತನಿಖೆಗೆ ಮುಂದಾಗಿದೆ.
ಹೊಳೆ ದಾಟುವಾಗ ತೆಪ್ಪ ಮಗುಚಿ ಯುವಕ ಸಾವು
ಹೊಸನಗರದ ಸಂಪೆಕಟ್ಟೆ ಗ್ರಾಪಂ ವ್ಯಾಪ್ತಿಯ ಬಂಟೋಡಿ ಎಂಬಲ್ಲಿ ಹೊಳೆ ದಾಟುವಾಗ ತೆಪ್ಪ ಮಗುಚಿ ಯುವಕ ಮೃತಪಟ್ಟಿದ್ದಾನೆ. ಮೃತನನ್ನು ಪೂರ್ಣೇಶ್ (22) ಎಂದು ಗುರುತಿಸಲಾಗಿದೆ.
ಜೊತೆಯಲ್ಲಿದ್ದ ಶರತ್ ಮತ್ತು ರಂಜನ್ ಎಂಬ ಯುವಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಮುಳುಗು ತಜ್ಞ ಈಶ್ವರ್ ಮಲ್ಪೆ ನೇತೃತ್ವದ ತಂಡ ಕಾರ್ಯಾಚರಣೆ ನಡೆಸಿ ಪೂರ್ಣೇಶ್ ಮೃತದೇಹವನ್ನು ಮೇಲಕ್ಕೆ ತಂದಿದ್ದಾರೆ.
40 ಅಡಿ ಆಳದ ನೀರಿನಲ್ಲಿ ಮೃತದೇಹ ದೊರೆತಿದೆ. ದೋಣಿ ತೆಪ್ಪದಲ್ಲಿ ಸಾಗುವಾಗ ಲೈಫ್ ಜಾಕೆಟ್ ಇಟ್ಟುಕೊಳ್ಳುವುದು ಅಗತ್ಯ ಎಂದು ಈಶ್ವರ್ ಮಲ್ಪೆ ಸ್ಥಳೀಯರಲ್ಲಿ ಮನವಿ ಮಾಡಿದ್ದಾರೆ.ಕಾಲು ಸಂಕ ನಿರ್ಮಾಣ ಮಾಡುವಂತೆ 20 ವರ್ಷಗಳಿಂದ ಮನವಿ ಮಾಡುತ್ತಿದ್ದೇವೆ. ಇಷ್ಟಾದರೂ ಜನಪ್ರತಿನಿಧಿಗಳು ಸ್ಪಂದಿಸಿಲ್ಲ ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಸಂಬಂಧ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.