Menu

ಭಾರತ ವಿರುದ್ಧದ ಮೊದಲ ಟೆಸ್ಟ್ ಗೆ ಇಂಗ್ಲೆಂಡ್ ತಂಡ ಪ್ರಕಟ: ಒಂದು ಅಚ್ಚರಿ ಆಯ್ಕೆ

jacob bethall

ಲಂಡನ್: ತವರಿನಲ್ಲಿ ಭಾರತ ವಿರುದ್ಧ ನಡೆಯುವ ಟೆಸ್ಟ್ ಸರಣಿಗೆ 14 ಆಟಗಾರರ ಇಂಗ್ಲೆಂಡ್ ತಂಡವನ್ನು ಪ್ರಕಟಿಸಲಾಗಿದ್ದು, ಜೆಮ್ಮಿ ಓವರ್ಟನ್ ಆಯ್ಕೆ ಮಾಡಿ ಅಚ್ಚರಿ ಮೂಡಿಸಿದೆ.

ಭಾರತ ವಿರುದ್ಧದ ಮೊದಲ ಟೆಸ್ಟ್ ಪಂದ್ಯಕ್ಕೆ ಇಂಗ್ಲೆಂಡ್ ತಂಡವನ್ನು ಪ್ರಕಟಿಸಲಾಗಿದ್ದು, ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಪರ ಐಪಿಎಲ್ ನಲ್ಲಿ ಆಡಿದ್ದ ಆರಂಭಿಕ ಬ್ಯಾಟ್ಸ್ ಮನ್ ಜೇಕೊಬ್ ಬೆಥಾಲಿ ಸ್ಥಾನ ಪಡೆದಿದ್ದಾರೆ.

ಮೊದಲ ಬಾರಿ ಐಪಿಎಲ್ ಚಾಂಪಿಯನ್ ಆಗಿ ಹೊರಹೊಮ್ಮಿರುವ ಆರ್ ಸಿಬಿ ತಂಡದ ಪರ ಕೆಲವು ಪಂದ್ಯಗಳನ್ನು ಆಡಿರುವ ಬೆಥಾಲಿ ಒಂದು ಪಂದ್ಯದಲ್ಲಿ ಅರ್ಧಶತಕ ಸಿಡಿಸಿ ಗಮನ ಸೆಳೆದಿದ್ದರು. ಅಲ್ಲದೇ ನ್ಯೂಜಿಲೆಂಡ್ ವಿರುದ್ಧದ ಪಂದ್ಯದಲ್ಲಿ ಅರ್ಧಶತಕ ಸಿಡಿಸಿ ಗಮನ ಸೆಳೆದಿದ್ದರು.

ಜೆಮ್ಮಿ ಓವರ್ಟನ್ ಸೀಮಿತ ಓವರ್ ಗಳ ಪಂದ್ಯಗಳಲ್ಲೇ ಹೆಚ್ಚಾಗಿ ಕಾಣಿಸಿಕೊಳ್ಳುತ್ತಿದ್ದಾರೆ. 2022ರಲ್ಲಿ ನ್ಯೂಜಿಲೆಂಡ್ ವಿರುದ್ಧದ ಸರಣಿಗೆ ಕೊನೆಯ ಬಾರಿಗೆ ಆಯ್ಕೆಯಾಗಿದ್ದು, 2 ವಿಕೆಟ್ ಪಡೆದು 97 ರನ್ ಗಳಿಸಿದ್ದರು. ಗಾಯಗೊಂಡಿರುವ ಜೂನ್ 20ರಂದು ಹೆಡ್ಡಿಂಗ್ಲೆಯಲ್ಲಿ ನಡೆಯಲಿರುವ ಪಂದ್ಯಕ್ಕೆ ಫಿಟ್ ಆಗುತ್ತಾರೆಯೇ ಎಂಬ ಗೊಂದಲದ ನಡುವೆ ಟೆಸ್ಟ್ ತಂಡದಲ್ಲಿ ಸ್ಥಾನ ಪಡೆದು ಅಚ್ಚರಿ ಮೂಡಿಸಿದ್ದಾರೆ.

ಇಂಗ್ಲೆಂಡ್ ತಂಡ

ಬೆನ್ ಸ್ಟೋಕ್ಸ್ (ನಾಯಕ), ಶೋಯೆಬ್ ಬಶೀರ್, ಜಾಕೋಬ್ ಬೆಥೆಲ್, ಹ್ಯಾರಿ ಬ್ರೂಕ್, ಬ್ರೈಡನ್ ಕಾರ್ಸೆ, ಸ್ಯಾಮ್ ಕುಕ್, ಜ್ಯಾಕ್ ಕ್ರಾಲಿ, ಬೆನ್ ಡಕೆಟ್, ಜೇಮೀ ಓವರ್ಟನ್, ಓಲಿ ಪೋಪ್, ಜೋ ರೂಟ್, ಜೇಮೀ ಸ್ಮಿತ್, ಜೋಶ್ ಟಂಗ್, ಕ್ರಿಸ್ ವೋಕ್ಸ್.

Related Posts

Leave a Reply

Your email address will not be published. Required fields are marked *