Tuesday, September 16, 2025
Menu

ಯು ಟ್ಯೂಬ್ ಚಾನಲ್‌ಗಳಿಗೆ ಪರವಾನಗಿ ನಿಗದಿ ಪರಿಶೀಲನೆ: ಸಿಎಂ ಸಿದ್ದರಾಮಯ್ಯ

ಯು ಟ್ಯೂಬ್ ಚಾನಲ್ ಗಳ ಹಾವಳಿ ತಡೆಯಲು ಲೈಸೆನ್ಸ್ ಕಡ್ಡಾಯಗೊಳಿಸಬೇಕು ಎಂಬ  ಬೇಡಿಕೆ ಬಗ್ಗೆ ಪರಿಶೀಲಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಕರ್ನಾಟಕ ಎಲೆಕ್ಟ್ರಾನಿಕ್ ಮೀಡಿಯಾ ಜರ್ನಲಿಸ್ಟ್ ಅಸೋಸಿಯೇಷನ್ ಉದ್ಘಾಟಿಸಿ, ಲೋಗೋ ಬಿಡುಗಡೆ ಮಾಡಿ ಮಾತನಾಡಿದರು.

ಮೊದಲು ನೀವೆಲ್ಲಾ ಊಹಾ ಪತ್ರಿಕೋದ್ಯಮವನ್ನು ನಿಲ್ಲಿಸಿ. ಇದು ಸಮಾಜಕ್ಕೆ ಹಾನಿಕರ ಎಲೆಕ್ಟ್ರಾನಿಕ್ ಮೀಡಿಯಾ ಪತ್ರಕರ್ತರಿಗೆ ಸಿಎಂ  ಕರೆ ನೀಡಿದರು. ನಾನು ರಾಜಕಾರಣಕ್ಕೆ ಬಂದು ಇಷ್ಟು ವರ್ಷದಲ್ಲಿ ಯಾವ ಮಾಧ್ಯಮಗಳಿಗೂ ನನ್ನ ಬಗ್ಗೆ ಹೀಗೇ ಬರೆಯಿರಿ, ಹಾಗೇ ಬರೆಯಿರಿ ಎಂದು ಯಾವತ್ತೂ ಹೇಳಿಲ್ಲ. ನನ್ನ ಬಗ್ಗೆ ಸುಳ್ಳುಗಳನ್ನು ಸತತವಾಗಿ ತೋರಿಸುವಾಗಲೂ ಯಾಕೆ ಹೀಗೆ ತೋರಿಸ್ತೀರಿ ಅಂತಲೂ ಯಾರಿಗೂ ಕೇಳಿಲ್ಲ. ನಿಮ್ಮಿಂದ ನನಗೆ ಏನೇನೂ ಅಪೇಕ್ಷೆ ಇಲ್ಲ. ಸಾಧ್ಯವಾದರೆ ಸತ್ಯ ತೋರಿಸಿ, ಸತ್ಯ ಬರೆಯಿರಿ ಎಂದರು.

ನನ್ನ ಕಾರಿನ ಮೇಲೆ ಕಾಗೆ ಕುಳಿತದ್ದೇ ಏನ್ ದೊಡ್ಡ ದೊಡ್ಡ ಚರ್ಚೆ ನಡೆಸಿದರು. ಆ ಚರ್ಚೆಯಲ್ಲಿ ಜ್ಯೋತಿಷಿಗಳು, ಚಾನಲ್ ಗಳು ತೋರಿಸಿದ್ದೆಲ್ಲಾ ಅಪ್ಪಟ ಸುಳ್ಳಾಯ್ತು. ನೀವು ಹೀಗೆಲ್ಲಾ ತೋರಿಸಿದರೆ ಜನ ಒಪ್ತಾರಾ ಯೋಚನೆ ಮಾಡಿ. ಅಭಿವ್ಯಕ್ತಿ ಸ್ವಾತಂತ್ರ್ಯಕ್ಕೆ ನಮ್ಮ‌ ಸರ್ಕಾರ ಸದಾ ಸಿದ್ದ. ಯಾವತ್ತೂ ಇದಕ್ಕೆ ಧಕ್ಕೆ ತರುವ ಕೆಲಸವನ್ನು ನಾನೂ ಯಾವತ್ತೂ ಮಾಡಿಲ್ಲ, ನಮ್ಮ ಸರ್ಕಾರವೂ ಮಾಡುವುದಿಲ್ಲ ಎಂದು ಸಿಎಂ ಹೇಳಿದರು.

ಬ್ಲಾಕ್ ಮೇಲ್ ಮತ್ತು ಕೀಳು ಮಟ್ಟದ ಪ್ರಾಕ್ಟೀಸ್ ಮಾಡುತ್ತಿರುವ ಯು ಟ್ಯೂಬ್ ಚಾನಲ್ ಗಳು ಸಮಾಜಕ್ಕೆ ಶಾಪ ಆಗಿದ್ದು, ಇಂಥವರಿಂದ ಪತ್ರಿಕೋದ್ಯಮದ ಘನತೆ ಹಾಳಾಗಿದೆ. ಹೀಗಾಗಿ ಯು ಟ್ಯೂಬ್ ಚಾನಲ್ ಗಳ ಹಾವಳಿ ತಡೆಯಲು ಇವರಿಗೂ ಲೈಸೆನ್ಸ್ ಕಡ್ಡಾಯಗೊಳಿಸಬೇಕು ಎಂದು ಸಂಘ ಮುಖ್ಯಮಂತ್ರಿಗಳಿಗೆ ಬೇಡಿಕೆ ಸಲ್ಲಿಸಿತು. ಈ ಬೇಡಿಕೆ ಬಗ್ಗೆ ಪರಿಶೀಲಿಸಲಾಗುವುದು ಎಂದು ಮುಖ್ಯಮಂತ್ರಿ ಹೇಳಿದರು.

Related Posts

Leave a Reply

Your email address will not be published. Required fields are marked *