ಮುಡಾ ಅಕ್ರಮ ಸೈಟ್ ಹಂಚಿಕೆ ಆರೋಪದಡಿ ಮುಡಾದ ಮಾಜಿ ಆಯುಕ್ತ ದಿನೇಶ್ ಕುಮಾರ್ ವಿರುದ್ಧ ತನಿಖೆಗೆ ಸರ್ಕಾರ ಅನುಮತಿ ನೀಡಿದೆ. ಮುಡಾದ ಮಾಜಿ ಅಧ್ಯಕ್ಷ ಹೆಚ್.ವಿ. ರಾಜೀವ್ ಮತ್ತು ದಿನೇಶ್ ವಿರುದ್ಧ ತನಿಖೆ ನಡೆಸಲು ಅನುಮತಿ ನೀಡುವಂತೆ ಲೋಕಾಯುಕ್ತ ಪೊಲೀಸರು ಪ್ರಾಸಿಕ್ಯೂಷನ್ ಅನುಮತಿ ಕೋರಿದ್ದರು. ದಿನೇಶ್ ವಿರುದ್ಧ ಮಾತ್ರ ತನಿಖೆಗೆ ಸರ್ಕಾರ ಅನುಮತಿ ನೀಡಿದೆ.
ಈಗಾಗಲೇ ಇಡಿ ಅಧಿಕಾರಿಗಳು ದಿನೇಶ್ ಅವರ ಆಸ್ತಿಯನ್ನು ಮುಟ್ಟುಗೋಲು ಹಾಕಿಕೊಂಡಿದ್ದು, 6 ತಿಂಗಳಿಂದ ತನಿಖೆಯಲ್ಲಿ ಯಾವುದೇ ಪ್ರಗತಿ ಕಂಡಿಲ್ಲ. ಪ್ರಾಸಿಕ್ಯೂಷನ್ ಅನುಮತಿ ಎಂದು ತಡವಾಗುತ್ತಿದೆ ಎಂದು ಹೇಳಿದೆ.
ಲೋಕಾಯುಕ್ತ ಪೊಲೀಸರ ನಡೆಯಿಂದ ಸಮಾಜದಲ್ಲಿ ನಾನು ಅವಮಾನ ಎದುರಿಸುತ್ತಿದ್ದೇನೆ. ಮಾನಸಿಕವಾಗಿ ಕುಗ್ಗಿದ್ದೇನೆ.ಬೇಗ ತನಿಖೆಗೆ ಆದೇಶಿಸಿ ಎಂದು ಸ್ನೇಹಮಯಿ ಕೃಷ್ಣ ಕೋರ್ಟ್‍ಗೆ ಮನವಿ ಸಲ್ಲಿಸಿದ್ದಾರೆ. ಹೆಚ್.ವಿ ರಾಜೀವ್ ವಿರುದ್ಧ ಪ್ರಾಸಿಕ್ಯೂಷನ್ ಅನುಮತಿ ಬೇಕಿಲ್ಲ ಎಂದು ಸ್ನೇಹಮಯಿ ಕೃಷ್ಣ ಪರ ವಕೀಲರು ವಾದಿಸಿದ್ದಾರೆ. ನ್ಯಾಯಾಲಯ ವಿಚಾರಣೆಯನ್ನು ಸೆ.29ಕ್ಕೆ ಮುಂದೂಡಿದೆ.
ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ನಡೆದಿದೆ ಎನ್ನಲಾದ ಅಕ್ರಮ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ ಕುಟುಂಬಕ್ಕೆ ಸುಪ್ರೀಂಕೋರ್ಟ್ ಬಳಿಕ ನಿವೃತ್ತ ನ್ಯಾಯಾಧೀಶ ದೇಸಾಯಿ ಸಮಿತಿ ವರದಿಯಲ್ಲಿ ಕೂಡ ಕ್ಲೀನ್
ಚಿಟ್ ಸಿಕ್ಕಿದೆ. ವರದಿಯಲ್ಲಿ 14 ಮುಡಾ ಸೈಟ್ ಅಕ್ರಮ ಆರೋಪದಲ್ಲಿ ಸಿಎಂ ಸಿದ್ದರಾಮಯ್ಯ ಪಾತ್ರವಿಲ್ಲ ಎಂದು ಉಲ್ಲೇಖಿಸಲಾಗಿದೆ.
ಸಿದ್ದರಾಮಯ್ಯ ಅಧಿಕಾರ ಬಳಸಿರುವುದು ಕಂಡು ಬಂದಿಲ್ಲ ದೂ ನ್ಯಾ. ದೇಸಾಯಿ ಕಮಿಟಿ ವರದಿಯಲ್ಲಿ ಸ್ಪಷ್ಟಪಡಿಸಿದೆ. ಪ್ರಕರಣದಲ್ಲಿ ಅಧಿಕಾರಿಗಳ ಲೋಪದ ಬಗ್ಗೆ ವರದಿಯಲ್ಲಿ ಉಲ್ಲೇಖ ಮಾಡಲಾಗಿದೆ.