ನವದೆಹಲಿ: ಆಗಸ್ಟ್ 3 ರಂದು ನೀಟ್-ಪಿಜಿ ಪರೀಕ್ಷೆಯನ್ನು ಒಂದೇ ಪಾಳಿಯಲ್ಲಿ ನಡೆಸಲು ಸುಪ್ರೀಂ ಕೋರ್ಟ್ ಶುಕ್ರವಾರ ರಾಷ್ಟ್ರೀಯ ಪರೀಕ್ಷಾ ಮಂಡಳಿಗೆ ಒಪ್ಪಿಗೆ ನೀಡಿದೆ.
ಪರೀಕ್ಷೆಯನ್ನು ನಡೆಸಲು ರಾಷ್ಟ್ರೀಯ ಪರೀಕ್ಷಾ ಮಂಡಳಿ ಎರಡು ತಿಂಗಳಿಗಿಂತ ಹೆಚ್ಚು ಸಮಯ ಕೋರಿದ್ದನ್ನು ಆರಂಭದಲ್ಲಿ ಪ್ರಶ್ನಿಸಿದ ನ್ಯಾಯಮೂರ್ತಿಗಳಾದ ಪ್ರಶಾಂತ್ ಕುಮಾರ್ ಮಿಶ್ರಾ ಮತ್ತು ಆಗಸ್ಟೀನ್ ಜಾರ್ಜ್ ಮಸಿಹ್ ಅವರನ್ನೊಳಗೊಂಡ ನ್ಯಾಯಪೀಠವು, ಆಗಸ್ಟ್ 3 ರಂದು ಓಇಇಖಿ-Pಉ ೨೦೨೫ ನ್ನು ನಡೆಸಬಹುದು ಎಂದು ಹೇಳಿದೆ.
ಅದಕ್ಕಿಂತ ಹೆಚ್ಚಿನ ಸಮಯವನ್ನು ನೀಡಲಾಗುವುದಿಲ್ಲ ಎಂದು ಕೂಡ ಸುಪ್ರೀಂ ಕೋರ್ಟ್ ಸ್ಪಷ್ಟಪಡಿಸಿದೆ.
ಸುಪ್ರೀಂ ಕೋರ್ಟ್ ಮೇ ೩೦ ರ ಆದೇಶದ ಪ್ರಕಾರ, ಪರೀಕ್ಷೆಯನ್ನು ಒಂದೇ ಪಾಳಿಯಲ್ಲಿ ನಡೆಸಲು ಸುಮಾರು ೧,೦೦೦ ಪರೀಕ್ಷಾ ಕೇಂದ್ರಗಳು ಬೇಕಾಗುತ್ತವೆ ಎಂದು ಪರೀಕ್ಷಾ ಏಜೆನ್ಸಿಯು ವಾದಿಸಿತ್ತು.
ವೈದ್ಯಕೀಯ ಶಿಕ್ಷಣದಲ್ಲಿ ಸ್ನಾತಕೋತ್ತರ (ಪಿಜಿ) ಕೋರ್ಸ್ಗಳಿಗೆ ಪ್ರವೇಶಕ್ಕಾಗಿ ನಡೆಸುವ ನೀಟ್ ಪರೀಕ್ಷೆಗೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್ ಮೇ 30 ರಂದು ಪ್ರಮುಖ ಆದೇಶಗಳನ್ನು ನೀಡಿತ್ತು.
ಜೂನ್ 15 ರಂದು ನಡೆಸಲು ಉದ್ದೇಶಿಸಿದ್ದ ನೀಟ್ – ಪಿಜಿ 2025 ಪರೀಕ್ಷೆಯನ್ನು ಏಕಕಾಲಕ್ಕೆ ಪೂರ್ಣಗೊಳಿಸಬೇಕು ಎಂದು ನ್ಯಾಯಮೂರ್ತಿ ವಿಕ್ರಮನಾಥ್, ನ್ಯಾಯಮೂರ್ತಿ ಸಂಜಯ್ ಕುಮಾರ್ ಮತ್ತು ನ್ಯಾಯಮೂರ್ತಿ ಎನ್.ವಿ. ಅಂಜಾರಿಯಾ ಅವರಿದ್ದ ತ್ರಿಸದಸ್ಯ ಪೀಠ ಹೇಳಿತ್ತು.