ಬೆಂಗಳೂರು: ರಾಜ್ಯ ಬಿಜೆಪಿಯ ರಾಜಕೀಯ ಚಿಂತನ ಶಿಬಿರದ ಉದ್ಘಾಟನಾ ಕಾರ್ಯಕ್ರಮವು ಇಂದು ಯಲಹಂಕದ ಸಿಂಗನಾಯಕನಹಳ್ಳಿಯ ರಮಡ ರೆಸಾರ್ಟ್ನಲ್ಲಿ ನಡೆಯಿತು.
ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ, ಬಿಜೆಪಿ ಕರ್ನಾಟಕ ರಾಜ್ಯ ಉಸ್ತುವಾರಿ ಮತ್ತು ರಾಜ್ಯಸಭಾ ಸಂಸದ ಡಾ. ರಾಧಾ ಮೋಹನ್ ದಾಸ್ ಅಗರ್ವಾಲ್, ಕೇಂದ್ರ ಸಚಿವರಾದ ಧರ್ಮೇಂದ್ರ ಪ್ರಧಾನ್, ಪ್ರಲ್ಹಾದ್ ಜೋಶಿ, ವಿ.ಸೋಮಣ್ಣ, ಮಾಜಿ ಮುಖ್ಯಮಂತ್ರಿ ಡಿ.ವಿ.ಸದಾನಂದ ಗೌಡ, ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ, ವಿರೋಧ ಪಕ್ಷದ ನಾಯಕ ಆರ್. ಅಶೋಕ್, ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.
ಎರಡು ದಿನಗಳ ಕಾಲ ಈ ಶಿಬಿರ ನಡೆಯಲಿದೆ. ಸಂಸದರು, ಶಾಸಕರು ಮತ್ತು ವಿಧಾನಪರಿಷತ್ ಸದಸ್ಯರು, ಆಹ್ವಾನಿತರು ಉಪಸ್ಥಿತರಿದ್ದರು.