ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲು ಸೇರಿರುವ ನಟ ದರ್ಶನ್ ಜೈಲಿನಲ್ಲಿ ಕನಿಷ್ಠ ಸೌಲಭ್ಯಗಳನ್ನು ಒದಗಿಸುವಂತೆ ಕೋರಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ಬೆಂಗಳೂರಿನ 57ನೇ ಸಿಎಂಎಂ ಕೋರ್ಟ್ ಸೆಪ್ಟೆಂಬರ್ 25ಕ್ಕೆ ಮುಂದೂಡಿದೆ.
ನ್ಯಾಯಾಲಯದ ನಿರ್ದೇಶನ ನೀಡಿದ್ದರೂ ತನಗೆ ಜೈಲಿನಲ್ಲಿ ಹಾಸಿಗೆ, ದಿಂಬಿನಂತಹ ಕನಿಷ್ಠ ಸೌಲಭ್ಯ ನೀಡುತ್ತಿಲ್ಲ ಎಂದು ಆರೋಪಿಸಿದ ನಟ ದರ್ಶನ್ ಮತ್ತೊಮ್ಮೆ ಅರ್ಜಿ ಸಲ್ಲಿಸಿದ್ದರು.
ಈ ಹಿಂದೆ ದರ್ಶನ್ ಕೆಲವು ಮೂಲಸೌಕರ್ಯ ಕಲ್ಪಿಸುವಂತೆ ಕೋರ್ಟ್‌ಗೆ ಮನವಿ ಮಾಡಿದ್ದರು. ಜೈಲಿನ ಮ್ಯಾನ್ಯುಯಲ್ ಪ್ರಕಾರ ಮೂಲ ಸೌಕರ್ಯ ನೀಡಿ ಎಂದು ಕಳೆದ ವಾರ ಕೋರ್ಟ್ ಆದೇಶ ಮಾಡಿತ್ತು. ಜೈಲಿನ ಅಧಿಕಾರಿಗಳು ದರ್ಶನ್‌ಗೆ ಜಮ್ಖಾನ, ದಿಂಬು ನೀಡಿ ವಾಕಿಂಗ್‌ಗೆ ಅವಕಾಶ ನೀಡಿದ್ದರು.
ದರ್ಶನ್ ಜೈಲಾಧಿಕಾರಿಗಳ ವಿರುದ್ಧ ಕೋರ್ಟ್‌ನಲ್ಲಿ ನ್ಯಾಯಾಂಗ ನಿಂದನೆ ಅರ್ಜಿ ಸಲ್ಲಿಸಿದ್ದಾರೆ. ಕೋರ್ಟ್ ಹೇಳಿದ್ದರೂ ಹಾಸಿಗೆ ಕೊಟ್ಟಿಲ್ಲ, ಜೈಲು ಸೇರಿ ತಿಂಗಳಾದರೂ ಕ್ವಾರಂಟೈನ್ ಸೆಲ್‌ನಲ್ಲಿ ಇಟ್ಟಿದ್ದಾರೆಂದು ದೂರಿದ್ದಾರೆ.
ಜೈಲಾಧಿಕಾರಿಗಳು ಕೋರ್ಟ್ ಆದೇಶವನ್ನು ಪಾಲಿಸದಿರುವುದರಿಂದ ತನಗೆ ಬಹಳಷ್ಟು ತೊಂದರೆ ಆಗಿದೆ. ಜೈಲಿನಲ್ಲಿ ಕನಿಷ್ಠ ಮೂಲ ಸೌಕರ್ಯವಿಲ್ಲದೆ ಜೀವನ ಕಷ್ಟಕರವಾಗಿದೆ ಎಂದು ತಿಳಿಸಿದ್ದಾರೆ. ಅರ್ಜಿಯನ್ನು ವಿಚಾರಣೆಗೆ ಒಳಪಡಿಸಿದ 57ನೇ ಸಿಎಂಎಂ ಕೋರ್ಟ್, ವಾದ-ಪ್ರತಿವಾದ ಆಲಿ. ಸೆಪ್ಟೆಂಬರ್ 19ರಂದು ಆದೇಶ ನೀಡುವುದಾಗಿ ಹೇಳಿತ್ತು. ಇಂದು ವಿಚಾರಣೆಯನ್ನು ಸೆಪ್ಟೆಂಬರ್ 25ಕ್ಕೆ ಮುಂದೂಡಿದೆ.