ಅಹಮದಾಬಾದ್ನಲ್ಲಿ ನಡೆದ ಏರ್ ಇಂಡಿಯಾ ವಿಮಾನ ದುರಂತದಲ್ಲಿ ಮೃತಪಟ್ಟವರ ಕುಟುಂಬಗಳಿಗೆ ಟಾಟಾ ಗ್ರೂಪ್ ತಲಾ 1 ಕೋಟಿ ರೂ. ಪರಿಹಾರ ಪ್ರಕಟಿಸಿದೆ.
ಲಂಡನ್ಗೆ ಹೊರಟಿದ್ದ 242 ಪ್ರಯಾಣಿಕರು ಮತ್ತು 12 ಮಂದಿ ಸಿಬ್ಬಂದಿ ಇದ್ದ ಏರ್ ಇಂಡಿಯಾ ವಿಮಾನ ಗುರುವಾರ ಮಧ್ಯಾಹ್ನ ಟೇಕಾಫ್ ಆದ ಕೆಲವೇ ನಿಮಿಷಗಳಲ್ಲಿ ಪತನಗೊಂಡಿದೆ. ದುರಂತದಲ್ಲಿ ಒಬ್ಬ ಪರಯಾಣಿಕ ಪವಾಡಸದೃಶವಾಗಿ ಪಾರಾಗಿದ್ದಾರೆ.
ಟಾಟಾ ಗ್ರೂಪ್ನ ಅಧ್ಯಕ್ಷ ಎನ್ ಚಂದ್ರಶೇಖರನ್ ಅವರು ಸಾಮಾಜಿಕ ಮಾಧ್ಯಮ ಎಕ್ಸ್ನಲ್ಲಿ ಸಂತಾಪ ಸೂಚಿಸಿದ್ದಾರೆ. ಈ ದುರಂತದಿಂದ ನಾವು ದುಃಖಿತರಾಗಿದ್ದೇವೆ. ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡ ಕುಟುಂಬಗಳೊಂದಿಗೆ ಮತ್ತು ಗಾಯಗೊಂಡವರೊಂದಿಗೆ ನಮ್ಮ ಮತ್ತು ಪ್ರಾರ್ಥನೆಗಳು ಇರುತ್ತವೆ ಎಂದು ಹೇಳಿದ್ದಾರೆ. ಮೃತರ ಕುಟುಂಬಗಳಿಗೆ ಟಾಟಾ ಗ್ರೂಪ್ ತಲಾ 1 ಕೋಟಿ ರೂ. ಹಾಗೂ ಗಾಯಗೊಂಡವರ ವೈದ್ಯಕೀಯ ವೆಚ್ಚವನ್ನು ಭರಿಸುತ್ತೇವೆ ಮತ್ತು ಅವರಿಗೆ ಅಗತ್ಯವಿರುವ ಆರೈಕೆ ಮತ್ತು ಬೆಂಬಲ ದೊರೆಯುವಂತೆ ನೋಡಿಕೊಳ್ಳುತ್ತೇವೆ. ವಿಮಾನ ಪತನಗೊಂಡ ಬಿಜೆ ವೈದ್ಯಕೀಯ ಕಾಲೇಜಿನ ಹಾಸ್ಟೆಲ್ನ ಪುನರ್ನಿರ್ಮಾಣಕ್ಕೆ ನೆರವು ನೀಡುತ್ತೇವೆ ಎಂದು ಟ್ವೀಟ್ ಮಾಡಿದ್ದಾರೆ.
ದುರಂತ ನಡೆದ ಸಂಭವಿಸಿದ ಬಿಜೆ ವೈದ್ಯಕೀಯ ಕಾಲೇಜಿನ ಹಾಸ್ಟೆಲ್ನ ಮೂವರು ಮೃತಪಟ್ಟಿದ್ದಾರೆ. ಗಾಯಗೊಂಡವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.