ಕೋಲಾರದ ಜಿಲ್ಲಾಸ್ಪತ್ರೆಯಲ್ಲಿ ಕಳೆದ ಆರು ದಿನದಿಂದ ಣ ನೀಡಿಲ್ಲ ಎಂಬ ಕಾರಣಕ್ಕೆ ರೋಗಿಗೆ ಶತ್ರ ಚಿಕಿತ್ಸೆ ನಡೆಸಿಲ್ಲ ಎಂಬ ಆರೋಪ ಕೇಳಿ ಬಂದಿದೆ.
ಮೂಳೆ ಮುರಿತದಿಂದ ಕೋಲಾರ ಜಿಲ್ಲಾಸ್ಪತ್ರೆಗೆ ದಾಖಲಾಗಿದ್ದ ಚಿಕ್ಕ ಮುನಿಯಪ್ಪ ಹಣ ನೀಡಿಲ್ಲ ಎಂಬ ಕಾರಣಕ್ಕೆ ಶಸ್ತ್ರ ಚಿಕಿತ್ಸೆ ಮಾಡದೆ ರೋಗಿಯನ್ನು ಆಸ್ಪತ್ರೆಯಲ್ಲಿ ಉಳಿಸಿಕೊಂಡಿದ್ದಾರೆ.
ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ಮೂಲದ ಚಿಕ್ಕ ಮುನಿಯಪ್ಪ ಅವರ ಎಡಗೈ ಮೂಳೆ ಮುರಿತವಾಗಿದೆ. ಸೆಪ್ಟೆಂಬರ್ 17 ರಂದು ಕೋಲಾರ ಜಿಲ್ಲಾಸ್ಪತ್ರೆಗೆ ದಾಖಲಾಗಿದ್ದಾರೆ. ಹಣ ನೀಡಿಲ್ಲ ಎಂಬ ಕಾರಣಕ್ಕೆ 6 ದಿನಗಳಿಂದ ಶಸ್ತ್ರ ನಡೆಸಿಲ್ಲ ಎಂದು ಹೇಳಲಾಗಿದೆ.
ಹಣ ನೀಡಿದ ಬೇರೆ ರೋಗಿಗಳಿಗೆ ಶಸ್ತ್ರ ಚಿಕಿತ್ಸೆ ಮಾಡಲಾಗಿದೆ ಎಂದು ಚಿಕ್ಕ ಮುನಿಯಪ್ಪ ಕುಟುಂಬದವರು ಹೇಳುತ್ತಿದ್ದಾರೆ. ಈ ಬಗ್ಗೆ ಚಿಕ್ಕಮುನಿಯಪ್ಪ ಅವರ ಪುತ್ರ ನಾಗೇಶ್ ಸಾಮಾಜಿಕ ಜಾಲತಾಣದಲ್ಲಿ ವೀಡಿಯೊ ಪೋಸ್ಟ್ ಮಾಡಿದ್ದಾರೆ. ಜಿಲ್ಲಾಸ್ಪತ್ರೆ ವಿರುದ್ಧ ಆಕ್ರೋಶ ಹೊರಹಾಕಿದ್ದು, ಜನಪ್ರತಿನಿಧಿಗಳು ಏನು ಮಾಡ್ತಿದ್ದಾರೆ ಎಂದು ಪ್ರಶ್ನಿಸಿದ್ದಾರೆ.