ಬೆಂಗಳೂರು ವಿಶ್ವವಿದ್ಯಾಲಯದ ಬಿಕಾಂ ಪರೀಕ್ಷೆಗೆ ಹೈಕೋರ್ಟ್ ವಿಭಾಗೀಯ ಪೀಠ ಅನುಮತಿ ನೀಡಿದ್ದು, ಸೋಮವಾರದಿಂದ ಬಿಕಾಂ 1, 3, 5ನೇ ಸೆಮಿಸ್ಟರ್ನ ಪರೀಕ್ಷೆಗಳು ಆರಂಭವಾಗಲಿವೆ.
ಪರೀಕ್ಷೆ ಮುಂದೂಡಿಕೆಯಿಂದ 40 ರಿಂದ 50 ಸಾವಿರ ಬಿಕಾಂ ವಿದ್ಯಾರ್ಥಿಗಳಿಗೆ ತೊಂದರೆಯಾಗುತ್ತದೆ. ಹೀಗಾಗಿ ಏಕಸದಸ್ಯ ಪೀಠದ ಆದೇಶಕ್ಕೆ ಪ್ರಶ್ನಿಸಿ ಬೆಂಗಳೂರು ವಿಶ್ವವಿದ್ಯಾಲಯ ವಿಭಾಗೀಯ ಪೀಠಕ್ಕೆ ಮೇಲ್ಮನವಿ ಸಲ್ಲಿಸಿತ್ತು.
ಸಿಎ ಫೌಂಡೇಶನ್ ಪರೀಕ್ಷೆಗಳು ಕೂಡ ಸೋಮವಾರದಿಂದಲೇ ಆರಂಭವಾಗಲಿವೆ. ಹೀಗಾಗಿ ಬಿಕಾಂ 1, 3, 5ನೇ ಸೆಮಿಸ್ಟರ್ನ ಪರೀಕ್ಷೆಗಳನ್ನು ಮುಂದೂಡುವಂತೆ ಹೈಕೋರ್ಟ್ ಏಕಸದಸ್ಯ ಪೀಠ ಬೆಂಗಳೂರು ವಿಶ್ವವಿದ್ಯಾಲಯಕ್ಕೆ ಆದೇಶಿಸಿತ್ತು.
ಏಕಸದಸ್ಯ ಪೀಠದ ಆದೇಶಕ್ಕೆ ಪ್ರಶ್ನಿಸಿ ಬೆಂಗಳೂರು ವಿಶ್ವವಿದ್ಯಾಲಯ ವಿಭಾಗೀಯ ಪೀಠಕ್ಕೆ ಮೇಲ್ಮನವಿ ಸಲ್ಲಿಸಿತ್ತು. ನ್ಯಾ. ಅನು ಶಿವರಾಮನ್, ನ್ಯಾ.ಎಂ.ಐ.ಅರುಣ್ ಅವರಿದ್ದ ಹೈಕೋರ್ಟ್ ವಿಭಾಗೀಯ ಪೀಠ ತುರ್ತು ವಿಚಾರಣೆ ವಿಚಾರಣೆ ನಡೆಸಿ ಏಕಸದಸ್ಯ ಪೀಠ ನೀಡಿದ್ದ ಆದೇಶಕ್ಕೆ ತಡೆ ನೀಡಿ, ಪರೀಕ್ಷೆ ನಡೆಸಲು ಅನುಮತಿ ನೀಡಿದೆ.