ಸೌಜನ್ಯ ಹೋರಾಟಗಾರ ಹಾಗೂ ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆ ಸಂಸ್ಥಾಪಕ ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ದಕ್ಷಿಣ ಕನ್ನಡ ಜಿಲ್ಲೆಯಿಂದ 1 ವರ್ಷದ ಅವಧಿಗೆ ಗಡಿಪಾರು ಮಾಡಿ ಸಹಾಯಕ ಆಯುಕ್ತ ಸ್ಟೆಲ್ಲಾ ವರ್ಗೀಸ್ ಆದೇಶ ಹೊರಡಿಸಿದ್ದಾರೆ. ತಿಮರೋಡಿಯನ್ನು ದಕ್ಷಿಣ ಕನ್ನಡ ಜಿಲ್ಲೆಯಿಂದ ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿಗೆ ಗಡಿಪಾರು ಮಾಡಲು ಆದೇಶಿಸಲಾಗಿದೆ.
ಸಾಮಾಜಿಕ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಮೇಲೆ ಸುಮಾರು 32 ಪ್ರಕರಣಗಳು ದಾಖಲಾಗಿವೆ. ಅಶಾಂತಿ ಸೃಷ್ಟಿ ಹಾಗೂ ಸಮಾಜದಲ್ಲಿ ಅಸ್ಥಿರತೆ ಉಂಟುಮಾಡುವ ಚಟುವಟಿಕೆ ಹೀಗೆ ವಿವಿಧ ಕಾನೂನು ಉಲ್ಲಂಘನೆಯಲ್ಲಿ ಭಾಗಿಯಾಗಿದ್ದಕ್ಕಾಗಿ ಅವರನ್ನು ಗಡಿಪಾರು ಮಾಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಈಗ ಬುರುಡೆ ಪ್ರಕರಣ ಹಾಗು ಶವ ಹೂತಿಟ್ಟ ಪ್ರಕರಣದಲ್ಲಿ ಆರೋಪಿ ಚೆನ್ನಯ್ಯನಿಗೆ ಆಶ್ರಯ ನೀಡಿದ ಆರೋಪವನ್ನು ಎದುರಿಸುತ್ತಿದ್ದಾರೆ.