ಚಿಕ್ಕಬಳ್ಳಾಪುರದ ಗುಡಿಬಂಡೆಯ ಮಾಚನಹಳ್ಳಿಯಲ್ಲಿ ನಡೆದ ರಸ್ತೆ ಅಪಘಾತಕ್ಕೆ ಪತ್ರಕರ್ತ ಜಿ.ಎಸ್. ಭರತ್ ಬಲಿಯಾಗಿದ್ದಾರೆ. ಗುಡಿಬಂಡೆಯಿಂದ ಬಾಗೇಪಲ್ಲಿಗೆ ಹೋಗುತ್ತಿದ್ದಾಗ ಈ ದುರಂತ ಸಂಭವಿಸಿದೆ.
ಇವರು ಮಗುವಿನ ನಾಮಕರಣ ಕಾರ್ಯಕ್ರಮದ ಸಿದ್ಧತೆಗಾಗಿ ಚಿಕ್ಕಬಳ್ಳಾಪುರದಲ್ಲಿ ಓಡಾಡುತ್ತಿದ್ದರು. ಭರತ್ ಚಲಾಯಿಸುತ್ತಿದ್ದ ಕಾರು ನಿಯಂತ್ರಣ ತಪ್ಪಿಗಂಗಮ್ಮನ ಗುಡಿ ದೇಗುಲಕ್ಕೆ ಡಿಕ್ಕಿಯಾಗಿದೆ. ಇದರಿಂದ ತಲೆಗೆ ಏಟಾಗಿ ಚಿಕಿತ್ಸೆಗೆ ಸ್ಪಂದಿಸಿದೆ ಕೊನೆಯುಸಿರೆಳೆದಿದ್ದಾರೆ.
ಹೊಸದಿಗಂತ ಪತ್ರಿಕೆಯ ಬೆಂಗಳೂರು ಕಚೇರಿಯಲ್ಲಿ ಕೆಲಸ ಮಾಡುತ್ತಿದ್ದ ಅವರಿಗೆ ಪತ್ನಿ, ಮಗು, ತಂದೆತಾಯಿ ಇದ್ದಾರೆ.