Saturday, February 14, 2026
Menu

ಸಿಲಿಂಡರ್ ಸ್ಫೋಟಗೊಂಡು ಏಳು ಮಂದಿಗೆ ಗಾಯ

ದಾಸರಹಳ್ಳಿಯ ಚೊಕ್ಕಸಂದ್ರದ ದಿಜುಧಾರ್​ ಎಂಬುವರ ಮನೆಯಲ್ಲಿ ಸಿಲಿಂಡರ್ ಸ್ಫೋಟಗೊಂಡು ಪಕ್ಕದ ಮನೆಯವರು ಸೇರಿದಂತೆ ಏಳು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ.

ದಿಜುಧಾರ್ (34), ಅಂಜಲಿದಾಸ್ (31), ಮನುಶ್ರೀ (3), ಮನು(25), ತಿಪ್ಪೇರುದ್ರಸ್ವಾಮಿ (50), ಪಕ್ಕದ ಮನೆಯ ಶೋಭ (60) ಮತ್ತು ಕರೀಬುಲ್ಲ ಗಂಭೀರವಾಗಿ ಗಾಯಗೊಂಡವರು.

ಗ್ಯಾಸ್​ ಸೋರಿಕೆಯಾಗಿ ಸಿಲಿಂಡರ್ ಸ್ಫೋಟಗೊಂಡಿದೆ‌ ಎನ್ನಲಾಗಿದೆ. ಗಾಯಾಳುಗಳನ್ನು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಪೀಣ್ಯ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ನಿಜವಾಗಿಯೂ ಸಿಲಿಂಡರ್‌ ಸ್ಪೋಟಕ್ಕೆ ಕಾರಣವೇನು ಎಂಬ ಬಗ್ಗೆ ಪೊಲೀಸರು ಹೆಚ್ಚಿನ ತನಿಖೆ ಕೈಗೊಂಡಿದ್ದಾರೆ.

ಮೊನ್ನೆಯಷ್ಟೇ ಅನೇಕಲ್ ತಾಲೂಕಿನ ಕಿತ್ತಾಗನಹಳ್ಳಿಯಲ್ಲಿ ಸಿಲಿಂಡರ್ ಸೋರಿಕೆಯಿಂದ ಸಂಭವಿಸಿದ ಸ್ಫೋಟದಲ್ಲಿ ಹಲವರು ಗಂಭೀರ ಗಾಯಗೊಂಡಿದ್ದರು.

Related Posts

Leave a Reply

Your email address will not be published. Required fields are marked *