Sunday, September 28, 2025
Menu

ಎಸ್‌ಐಟಿ ರಚನೆಯಿಂದ ಎಲ್ಲ ಸತ್ಯ ಹೊರಬಂದಿದೆ, ಸರ್ಕಾರಕ್ಕೆ ಆಭಾರಿ: ವೀರೇಂದ್ರ ಹೆಗ್ಗಡೆ

ಧರ್ಮಸ್ಥಳ ಸರಣಿ ಹತ್ಯೆ ಪ್ರಕರಣದಕ್ಕೆ ಸಂಬಂಧಿಸಿದಂತೆ ತನಿಖೆಗೆ ರಾಜ್ಯ ಸರ್ಕಾರ ಎಸ್‌ಐಟಿ ರಚಿಸಿದ್ದು ಇದರಿಂದ ಸತ್ಯವೇನೆಂಬುದು ಹೊರಬರುತ್ತಿದೆ. ಸರ್ಕಾರಕ್ಕೆ ನಾನು ಆಭಾರಿಯಾಗಿದ್ದೇನೆ ಎಂದು ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ ವೀರೇಂದ್ರ ಹೆಗ್ಗಡೆ ಹೇಳಿದ್ದಾರೆ.

ಧರ್ಮಸ್ಥಳದಲ್ಲಿ ನಡೆದ ಅಮೃತವರ್ಷಿಣಿ ಸಭಾಂಗಣದಲ್ಲಿ ಮಾತನಾಡಿದ ಅವರು, ಕೋವಿಡ್‌ ನಂತರದ ದಿನಗಳಲ್ಲಿ ನಾನು ಅನೇಕ ಪುಸ್ತಕಗಳನ್ನು ಓದುತ್ತಿದ್ದೇನೆ. ಸಿದ್ದಗಂಗಾ ಶ್ರೀಗಳ ಹಲವು ಪುಸ್ತಕವನ್ನು ನಾನು ಓದಿದ್ದೇನೆ. ನಮ್ಮನ್ನ ಹೊಗಳಿದ್ದೀರಿ. ಆದರೆ, ಶತ್ರುತ್ವ ಯಾಕೆ ಬಂತು ಅಂತ ನಮಗೆ ಗೊತ್ತಿಲ್ಲ. ಇಷ್ಟು ಹಗೆತನ, ಅಪವಾದ ಯಾಕೆ ಬಂತು ಅಂತನೂ ಗೊತ್ತಿಲ್ಲ. ನಾವು ಸೇವೆ ಮಾಡ್ತೇವೆ, ಆದರೆ ಸೇವೆ ಪ್ರಚಾರದ ವಸ್ತುವಲ್ಲ ಎಂದು ಹೇಳಿದ್ದಾರೆ.

ಧರ್ಮಸ್ಥಳದಲ್ಲಿ ಯಾವುದೇ ತರಹ ಬೇಡ ಭಾವಗಳಿಲ್ಲ. ಧರ್ಮಸ್ಥಳ ಬೇರೆ ಅಲ್ಲ, ಧರ್ಮಸ್ಥಳದ ಊರಿನವರು ಬೇರೆ ಅಲ್ಲ. ಎಷ್ಟು ನಿಷ್ಠುರವಾಗಿ ನಮ್ಮ ಮೇಲೆ ದಬ್ಬಾಳಿಕೆ ನಡೆದಿದೆ ಅಂತ ನೀವು ನೋಡಿದ್ದೀರಿ. ಇದುವರೆಗೂ ಯಾಕೆ ಇಷ್ಟು ದ್ವೇಷ ನನ್ನ ಮೇಲೆ ಇದೆ ಅಂತ ನನಗೆ ಗೊತ್ತಾಗಿಲ್ಲ. ಈಗ ಮನಸ್ಸು ಸ್ವಲ್ಪ ಹಗುರವಾಗಿದೆ, ಎತ್ತರದ ಬೆಟ್ಟದಿಂದ ನೀರು ಹರಿದಿದೆ. ನಮ್ಮ ಮೇಲೆ ದೃಢವಾದ ನಂಬಿಕೆ ಇಟ್ಟ ಎಲ್ಲರಿಗೂ ನಾನು ಆಭಾರಿ ಎಂದು ತಮ್ಮ ಬೆಂಬಲಿಗರಿಗೆ ಕೃತಜ್ಞತೆ ತಿಳಿಸಿದ್ದಾರೆ.

ಈಗಾಗಲೇ ಲಕ್ಷಾಂತರ ಜನರು ಇಲ್ಲಿಗೆ ಬಂದು ಹೋಗಿದ್ದಾರೆ. ನಿಮ್ಮ ಧರ್ಮ ಸೋತರೆ, ನಮ್ಮ ಧರ್ಮ ಸೋತ ಹಾಗೆ ಅಂತ ಹೇಳಿದ್ದಾರೆ. ಈ ಶತ್ರುತ್ವ ಯಾಕೆ ಅಂತ ಕೇಳ್ತಾರೆ, ನನಗೂ ಈ ದ್ವೇಷ ಯಾಕೆ ಅಂತ ಬೇಕು. ನಾವು ಯಾರನ್ನೂ ಹೀಯಾಳಿಸಿಲ್ಲ, ದ್ವೇಷ ಕೂಡ ಮಾಡಿಲ್ಲ. ನಾವು ತಪ್ಪು ಮಾಡದ ಕಾರಣ ನಮಗೆ ಆತ್ಮವಿಶ್ವಾಸ ಇದೆ ಎಂದು ಹೇಳಿದರು. ಬೆಂಗಳೂರು ಆಥವಾ ಎಲ್ಲೋ ಕೂತು ಟೀಕೆ ಮಾಡೋರು ನಮಗೆ ಬೇಡ. ನಮಗೆ ನಮ್ಮವರು ಬೇಕು, ನಮ್ಮ ಜೊತೆ ನಿಲ್ಲೋರು ಬೇಕು. ನಮ್ಮ ಮೇಲೆ ಪ್ರೀತಿ ತೋರಿದ ಎಲ್ಲಾ ಹೆಣ್ಮಕ್ಕಳಿಗೂ ನಾನು ಆಭಾರಿ ಎಂದಿದ್ದಾರೆ.

‘ಎಸ್ಐಟಿ ವರದಿ ಅರ್ಧ ಬಂದ ಕಾರಣ ನಾನು ಇಷ್ಟು ಧೈರ್ಯವಾಗಿ ಮಾತನಾಡುತ್ತಾ ಇದ್ದೇನೆ. ಸರ್ಕಾರಕ್ಕೆ ನಾನು ಆಭಾರಿ, ಎಸ್ಐಟಿ ಮಾಡಿದ ಕಾರಣ ಸತ್ಯ ಹೊರಗೆ ಬರುತ್ತಿದ. ನಮ್ಮ ಹೊಳಪು ಹಾಗೇ ಉಳಿದಿದೆ, ಇದಕ್ಕೆ ನಾನು ಸರ್ಕಾರಕ್ಕೆ ಕೃತಜ್ಞತೆ ಸಲ್ಲಿಸುತ್ತೇನೆ. ನಾವು ಸತ್ಯದಿಂದ ಇದ್ದೇವೆ, ಮುಂದೆಯೂ ಹಾಗೆ ಇರುತ್ತೇವೆ ಎಂದು ಹೆಗ್ಗಡೆ ಹೇಳಿದ್ದಾರೆ.

 

Related Posts

Leave a Reply

Your email address will not be published. Required fields are marked *