Sunday, September 28, 2025
Menu

ನಾವು ಯಾವಾಗಲೂ ಒಳ್ಳೆಯದನ್ನೇ ಮಾಡೋದು: ವೀರೇಂದ್ರ ಹೆಗ್ಗಡೆ ಹೇಳಿಕೆಗೆ ಸಿದ್ದರಾಮಯ್ಯ ಪ್ರತಿಕ್ರಿಯೆ

ಧರ್ಮಸ್ಥಳ ಸರಣಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಶೇಷ ತನಿಖಾ ತಂಡ(SIT) ರಚನೇ ಮಾಡಿದ್ದರಿಂದ ಸತ್ಯ ಏನೆಂದು ಹೊರಬರುತ್ತಿದೆ, ಇದಕ್ಕಾಗಿ ನಾನು ಸರ್ಕಾರಕ್ಕೆ ಆಭಾರಿಯಾಗಿದ್ದೇನೆ ಎಂದು ಧರ್ಮಾಧಿಕಾರಿ ವೀರೇಂದ್ರ ಹೆಗಡೆ ಅವರು ಹೇಳಿದ್ದಾರೆ. ಈ ಹೇಳಿಕೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಕ್ರಿಯಿಸಿದ್ದಾರೆ.

ಬೆಂಗಳೂರಿನಲ್ಲಿ ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿದ ಸಿದ್ದರಾಮಯ್ಯ, ನಾವು ಯಾವಾಗಲೂ ಒಳ್ಳೆಯದನ್ನೇ ಮಾಡುವುದು. ಯಾರಿಗೂ ಕೆಟ್ಟದ್ದು ಮಾಡಲ್ಲ ಎಂದು ಹೇಳಿದ್ದಾರೆ.

ಉಪ ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್‌ ಪ್ರತಿಕ್ರಿಯಿಸಿ, ಕಾಂಗ್ರೆಸ್ ಸರ್ಕಾರ ಯಾವತ್ತಿಗೂ ಯಾರಿಗೂ ತೊಂದರೆ ಬಯಸುವುದಿಲ್ಲ.ಕಾನೂನಿನ ಚೌಕಟ್ಟಿನೊಳಗೆ ಏನು ನ್ಯಾಯ ಒದಗಿಸಬೇಕೋ ಅದನ್ನು ಮಾಡುತ್ತೇವೆ ಎಂದರು.

ತಪ್ಪು ಮಾಡಿದವರಿಗೂ ಕಾನೂನು ರೀತಿಯಲ್ಲಿ ಕ್ರಮ ವಹಿಸಲಾಗುತ್ತದೆ. ಸಾರ್ವಜನಿಕರು ಹಾಗೂ ಮಾಧ್ಯಮದವರು ಇದನ್ನು ದೊಡ್ಡದಾಗಿ ಬಿಂಬಿಸಿದ್ದೀರಿ. ನಾವು ಧರ್ಮಸ್ಥಳ ಪ್ರಕರಣದಲ್ಲಿ ಮಧ್ಯಪ್ರವೇಶ ಮಾಡಿಲ್ಲ. ನಾವು ಕೂಡ ಅಧಿಕಾರಿಗಳ ಬಳಿ ಏನು ಅಂತಾ ಕೇಳಿಲ್ಲ. ಇಷ್ಟು ದಿನಗಳ ಕಾಲ ಮಾಧ್ಯಮಗಳಲ್ಲಿ ಬಂದ ವರದಿ ಬಗ್ಗೆ ನಾವು ಮಾತಾಡಿದ್ದೇವೆ. ಮುಂದೆ ಅಂತಿಮವಾದ ವರದಿ ಬರಲಿ, ಆ ನಂತರ ಮಾತಾಡೋಣ ಎಂದು ಶಿವಕುಮಾರ್ ಹೇಳಿದರು.

ಧರ್ಮಸ್ಥಳ ಪ್ರಕರಣದಕ್ಕೆ ಸಂಬಂಧಿಸಿದಂತೆ ತನಿಖೆಗೆ ರಾಜ್ಯ ಸರ್ಕಾರ ಎಸ್‌ಐಟಿ ರಚಿಸಿದ್ದು ಇದರಿಂದ ಸತ್ಯವೇನೆಂಬುದು ಹೊರಬರುತ್ತಿದೆ. ಸರ್ಕಾರಕ್ಕೆ ನಾನು ಆಭಾರಿಯಾಗಿದ್ದೇನೆ ಎಂದು ಡಾ.ಡಿ ವೀರೇಂದ್ರ ಹೆಗ್ಗಡೆ ಹೇಳಿದ್ದಾರೆ.

‘ಎಸ್ಐಟಿ ವರದಿ ಅರ್ಧ ಬಂದ ಕಾರಣ ನಾನು ಇಷ್ಟು ಧೈರ್ಯವಾಗಿ ಮಾತನಾಡುತ್ತಾ ಇದ್ದೇನೆ. ಸರ್ಕಾರಕ್ಕೆ ನಾನು ಆಭಾರಿ, ಎಸ್ಐಟಿ ಮಾಡಿದ ಕಾರಣ ಸತ್ಯ ಹೊರಗೆ ಬರುತ್ತಿದ. ನಮ್ಮ ಹೊಳಪು ಹಾಗೇ ಉಳಿದಿದೆ, ಇದಕ್ಕೆ ನಾನು ಸರ್ಕಾರಕ್ಕೆ ಕೃತಜ್ಞತೆ ಸಲ್ಲಿಸುತ್ತೇನೆ. ನಾವು ಸತ್ಯದಿಂದ ಇದ್ದೇವೆ, ಮುಂದೆಯೂ ಹಾಗೆ ಇರುತ್ತೇವೆ ಎಂದು ಹೆಗ್ಗಡೆ ಹೇಳಿದ್ದಾರೆ.

Related Posts

Leave a Reply

Your email address will not be published. Required fields are marked *